ಯಲ್ಲಮ್ಮನ ಗುಡ್ಡದ ಅಂಗಡಿಗಳ ಮೇಲೆ ಅಧಿಕಾರಿಗಳಿಂದ ರೇಡ್: ಕುಂಕುಮ, ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಕುಂಕುಮ, ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧಿ ಮಾತ್ರೆಗಳನ್ನು ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ್ದಾರೆ. ಅವಧಿ ಮೀರಿದ ಆಹಾರ ಪದಾರ್ಥಗಳು ಮತ್ತು ಕಳಪೆ ಗುಣಮಟ್ಟದ ಧಾರ್ಮಿಕ ವಸ್ತುಗಳ ಮಾರಾಟವೂ ಕಂಡುಬಂದಿದೆ. ಭಕ್ತರ ಆರೋಗ್ಯದ ದೃಷ್ಟಿಯಿಂದ ಎಲ್ಲಮ್ಮ ದೇಗುಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಭಾವತಿ ನೇತೃತ್ವದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬೆಳಗಾವಿ, ಸೆಪ್ಟೆಂಬರ್ 21: ಸವದತ್ತಿಯಲ್ಲಿರುವ ಐತಿಹಾಸಿಕ ಯಲ್ಲಮ್ಮನ ಗುಡ್ಡದಲ್ಲಿ ವ್ಯಾಪಾರಸ್ಥರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕುಂಕುಮ ಭಂಡಾರ, ಕಿರಾಣಿ ಅಂಗಡಿಗಳ ಮೇಲೆ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಭಾವತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅಂಗಡಿಗಳಲ್ಲಿ ಔಷಧ ಮತ್ತು ಮಾತ್ರೆ ಪತ್ತೆಯಾಗಿದೆ. ಅಂಗಡಿಗಳಲ್ಲಿ ಅಸ್ವಚ್ಛತೆ ಹಾಗೂ ಕಳಪೆ ಆಹಾರ ಸಾಮಗ್ರಿ ಕಂಡು ಅಧಿಕಾರಿಗಳು ಗರಂ ಆಗಿದ್ದು, ನಿಮ್ಮ ಮನೆಯಲ್ಲೂ ಇದೇ ತರಕಾರಿ ತಿಂತೀರಾ ಎಂದು ತರಾಟೆಗೆ ಪಡೆದಿದ್ದಾರೆ. ತಂಪು ಪಾನೀಯ, ಆಹಾರ ಪ್ಯಾಕೆಟ್ ಮೇಲೆ ಎಕ್ಸ್‌ಪೈರಿ ಡೇಟ್ ಇಲ್ಲದಿರೋದು ಕಂಡುಬಂದಿರುವ ಜೊತೆಗೆ ಕೆಲವೊಂದು ಅಂಗಡಿ ಪರವಾನಗಿ ನವೀಕರಸದೆ ವ್ಯಾಪಾರ ವಹಿವಾಟು ಮಾಡುತ್ತಿರೋದು ಈ ವೇಳೆ ಗೊತ್ತಾಗಿದೆ. ನಿಯಮ ಮೀರಿದ ಅಂಗಡಿಗಳ ವಿದ್ಯುತ್, ನೀರಿನ ಸಂಪರ್ಕ ಕಡಿತಕ್ಕೆ ಸೂಚನೆ ನೀಡಲಾಗಿದ್ದು, ಭಕ್ತರಿಗೆ ಯಾವುದೇ ವರ್ತಕರು ಮೋಸ ಮಾಡಬಾರದೆಂದು ಪ್ರಭಾವತಿ ವಾರ್ನಿಂಗ್ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

