Dy CM slams official publicly: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಲಸ ಮಾಡುತ್ತಿರುವ ವೇಗಕ್ಕೆ ಕುದುರಿಕೊಳ್ಳಲು ಅಧಿಕಾರಿಗಳಿಗೆ ಕಷ್ಟವಾಗುತ್ತಿದೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jun 05, 2023 | 1:07 PM

ಒಬ್ಬ ಮಹಿಳಾ ಅರಣ್ಯಾಧಿಕಾರಿಯ ಕಾರ್ಯವೈಖರಿ ಬಗ್ಗೆ ಶಿವಕುಮಾರ್ ಸಾರ್ವಜನಿಕವಾಗಿ ಬೇಸರ ಹಾಗೂ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಗ್ರೆಸಿವ್ ಆಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಕೆಲಸ ಕಾರ್ಯಗಳಲ್ಲಿ ತಮ್ಮೊಂದಿಗೆ ವೇಗ (pace) ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಿದ್ದಾರೆ. ನಗರದ ರಾಚೇನಹಳ್ಳಿ ಕೆರೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನ (World Environment Day) ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿಡನೆಡುವ ಕೆಲಸಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಶಿವಕುಮಾರ್ ಹೇಳಿದರು. ಅದೇ ಸಂದರ್ಭದಲ್ಲಿ ಒಬ್ಬ ಮಹಿಳಾ ಅರಣ್ಯಾಧಿಕಾರಿಯ (Forest officer) ಕಾರ್ಯವೈಖರಿ ಬಗ್ಗೆ ಸಾರ್ವಜನಿಕವಾಗಿ ಬೇಸರ ಹಾಗೂ ಅಸಮಾಧಾನ ವ್ಯಕ್ತಪಡಿಸಿದ ಅವರು ಹೆಚ್ಚಿನ ಶ್ರದ್ಧೆವಹಿಸಿ ಕೆಲಸ ಮಾಡುವಂತೆ ಸೂಚಿಸಿದರು. ಅವರ ಮಾತಿನಿಂದ ಅಧೀರಳಾದ ಅಧಿಕಾರಿಣಿ ಗೋಣು ಅಲ್ಲಾಡಿಸುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.