ಆಮೆ ಸಂಸ್ಕಾರಕ್ಕೆಂದು ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ

Edited By:

Updated on: Oct 26, 2026 | 3:40 PM

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಅಪೂರ್ವ ಘಟನೆಯೊಂದು ನಡೆದಿದೆ. ಆಮೆ ಸಂಸ್ಕಾರದ ನಿಮಿತ್ತ ಮಕ್ಕಳು ಅಂಗಳದಲ್ಲಿ ನೆಲ ಅಗೆಯುತ್ತಿದ್ದಾಗ ಮಣ್ಣಿನ ಕುಡಿಕೆಯೊಂದು ದೊರೆತಿದೆ. ಈ ಕುಡಿಕೆಯನ್ನು ತೆರೆದು ನೋಡಿದಾಗ ಅದರೊಳಗೆ ಹಳೆಯ ಕಾಲದ ನಾಣ್ಯಗಳು ಪತ್ತೆಯಾಗಿವೆ. ಈ ಘಟನೆಯು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಸ್ಥಳಕ್ಕೆ ತಹಶೀಲ್ದಾರ್ ರಹೆನ್ ಪಾಶಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ, ಅಕ್ಟೋಬರ್​​ 26: ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯಲ್ಲಿ ಆಮೆಯ ಅಂತಿಮ ಸಂಸ್ಕಾರಕ್ಕೆಂದು ಮಕ್ಕಳು ಮನೆಯ ಅಂಗಳ ಅಗೆದಾಗ ಪುಟ್ಟ ಕುಡಿಕೆಯಲ್ಲಿ ಹಳೇ ಕಾಲದ ನಾಣ್ಯಗಳು ಪತ್ತೆಯಾಗಿವೆ. ರಂಗಮ್ಮ ಎಂಬುವರ ಮನೆ ಅಂಗಳದಲ್ಲಿ ಕುಡಿಕೆ ಪತ್ತೆಯಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ರಹೆನ್ ಪಾಶಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪುರಾತತ್ವ ಇಲಾಖೆ ಅಧಿಕಾರಿಗಳಿಗೂ ಈ ಬಗ್ಗೆ ಮಾಹಿತಿ ರವಾನಿಸಲಾಗಿದ್ದು, ಕುಡಿಕೆ ಮತ್ತು ನಾಣ್ಯವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More