ಬಾಗಲಕೋಟೆ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ವೃದ್ಧ

Edited By: ವಿವೇಕ ಬಿರಾದಾರ

Updated on: Dec 26, 2023 | 2:52 PM

ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್​ ​ನಲ್ಲಿರುವ ಲಡ್ಡು ಮುತ್ಯಾ ದೇವಸ್ಥಾನದ ಭವನದಲ್ಲಿ ಇಂದು (ಡಿ.26) ಉಸ್ತುವಾರಿ ಸಚಿವ ಆರ್​.ಬಿ ತಿಮ್ಮಾಪುರ ನೇತೃತ್ವದಲ್ಲಿ ಜನತಾ ದರ್ಶನ ನಡೆಯಿತು. ಈ ಜನತಾ ದರ್ಶನಕ್ಕೆ ಖಜ್ಜಿಡೋಣಿ ಗ್ರಾಮದ ನಿವಾಸಿ ವೃದ್ಧ ಪಾಂಡಪ್ಪ ಆಗಮಿಸಿದ್ದರು. ಮುಂದೇನಾಯ್ತು ವಿಡಿಯೋ ನೋಡಿ...

ಬಾಗಲಕೋಟೆ, ಡಿಸೆಂಬರ್​ 26: ಬಾಗಲಕೋಟೆ (Bagalkote) ತಾಲೂಕಿನ ಗದ್ದನಕೇರಿ ಕ್ರಾಸ್ (Gaddnkeri Cross) ​ನಲ್ಲಿರುವ ಲಡ್ಡು ಮುತ್ಯಾ ದೇವಸ್ಥಾನದ ಭವನದಲ್ಲಿ ಇಂದು (ಡಿ.26) ಉಸ್ತುವಾರಿ ಸಚಿವ ಆರ್​.ಬಿ ತಿಮ್ಮಾಪುರ (RB Timmapur) ನೇತೃತ್ವದಲ್ಲಿ ಜನತಾ ದರ್ಶನ (Janata Darshan) ನಡೆಯಿತು. ಈ ಜನತಾ ದರ್ಶನಕ್ಕೆ ಖಜ್ಜಿಡೋಣಿ ಗ್ರಾಮದ ನಿವಾಸಿ ವೃದ್ಧ ಪಾಂಡಪ್ಪ ಆಗಮಿಸಿದ್ದರು. ಈ ವೇಳೆ ಬಿಸಿಲಿನ ತಾಪಕ್ಕೆ ವೃದ್ಧ ಪಾಂಡಪ್ಪ ಲೋ ಬಿಪಿಯಿಂದ ನಿಂತಲ್ಲೇ ಕುಸಿದು ಬಿದ್ದರು. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಕೂಡಲೆ ವೃದ್ಧ ಪಾಂಡಪ್ಪ ಅವರಿಗೆ ಬಿಪಿ ಚೆಕ್​​ಮಾಡಿ, ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸಿದರು.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More