ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ, ಹೇಗಿದೆ ನೋಡಿ

Edited By:

Updated on: May 01, 2026 | 7:40 PM

ಒಂದೆಡೆ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರದ ಸ್ಥಿತಿ ಎದುರಾಗಿದೆ. ಹೌದು...ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಣ್ಣೂರ ಬಳಿ ಇರುವ 51ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯ ಬಹುತೇಕ ಖಾಲಿಯಾಗಿದೆ. ಇದರ ಪರಿಣಾಮ ಡ್ಯಾಂ ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರವಾಗಿದೆ. ವಿಠ್ಠಲ ದೇವಸ್ಥಾನ 1978ರಿಂದ ನೀರಲ್ಲೇ ಮುಳುಗಿ ಹೋಗಿದೆ. ಆದ್ರೆ, 2022ರಲ್ಲಿ ಜಲಾಶಯದಲ್ಲಿ ನೀರು ಖಾಲಿಯಾಗಿದ್ದಾಗ ವಿಠ್ಠಲ ಭಕ್ತರಿಗೆ ದರ್ಶನ ನೀಡಿದ್ದ. ಗುತ್ತಿ ಮಣ್ಣನಿಂದ ನಿರ್ಮಿಸಿರುವ ದೇವರ ಮೂರ್ತಿ ನಿರಂತರವಾಗಿ ನೀರಲ್ಲಿದ್ದರೂ ಸಹ ಎನೂ ಆಗಿಲ್ಲ. ಈ ಬಾರಿ ಸಹ ಅತೀ ಹೆಚ್ಚು ಬಿಸಿಲು ಹಿನ್ನೆಲೆಯಲ್ಲಿ ಡ್ಯಾಂನಲ್ಲಿ ನೀರು ಖಾಲಿಯಾಗಿದ್ದು, ಸಂಪೂರ್ಣವಾಗಿ ದೇವಸ್ಥಾನ ಓಪನ್ ಆಗುವ ಸಾಧ್ಯತೆಗಳಿವೆ.

ಬೆಳಗಾವಿ, (ಮೇ 01): ಒಂದೆಡೆ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರದ ಸ್ಥಿತಿ ಎದುರಾಗಿದೆ. ಹೌದು…ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಣ್ಣೂರ ಬಳಿ ಇರುವ 51ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯ (Hidkal Dam) ಬಹುತೇಕ ಖಾಲಿಯಾಗಿದೆ. ಇದರ ಪರಿಣಾಮ ಡ್ಯಾಂ ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರವಾಗಿದೆ. ವಿಠ್ಠಲ ದೇವಸ್ಥಾನ 1978ರಿಂದ ನೀರಲ್ಲೇ ಮುಳುಗಿ ಹೋಗಿದೆ. ಆದ್ರೆ, 2022ರಲ್ಲಿ ಜಲಾಶಯದಲ್ಲಿ ನೀರು ಖಾಲಿಯಾಗಿದ್ದಾಗ ವಿಠ್ಠಲ ಭಕ್ತರಿಗೆ ದರ್ಶನ ನೀಡಿದ್ದ. ಗುತ್ತಿ ಮಣ್ಣನಿಂದ ನಿರ್ಮಿಸಿರುವ ದೇವರ ಮೂರ್ತಿ ನಿರಂತರವಾಗಿ ನೀರಲ್ಲಿದ್ದರೂ ಸಹ ಎನೂ ಆಗಿಲ್ಲ. ಈ ಬಾರಿ ಸಹ ಅತೀ ಹೆಚ್ಚು ಬಿಸಿಲು ಹಿನ್ನೆಲೆಯಲ್ಲಿ ಡ್ಯಾಂನಲ್ಲಿ ನೀರು ಖಾಲಿಯಾಗಿದ್ದು, ಸಂಪೂರ್ಣವಾಗಿ ದೇವಸ್ಥಾನ ಓಪನ್ ಆಗುವ ಸಾಧ್ಯತೆಗಳಿವೆ. ಈ ಕುರಿತು ನಮ್ಮ ಪ್ರತಿನಿಧಿ ಸ್ಥಳದಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More