ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಹೇಳಿದ್ದಿಷ್ಟು
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಕೊಲೆ ಪ್ರಕರಣದ ತನಿಖೆಯಲ್ಲಿ ಬೆಂಗಳೂರು ಪೊಲೀಸರು ತೊಡಗಿಕೊಂಡಿದ್ದಾರೆ. ಓಂ ಪ್ರಕಾಶ್ ಅವರ ಪುತ್ರನ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಓಂ ಪ್ರಕಾಶ್ ಅವರ ಪತ್ನಿ ಮತ್ತು ಮಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿ ಮೂವರು ಇದ್ದರು ಎಂದು ತಿಳಿದುಬಂದಿದೆ.
ಬೆಂಗಳೂರು, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಮಾತನಾಡಿ, ಘಟನೆ ಕುರಿತು ಓಂ ಪ್ರಕಾಶ್ ಪುತ್ರ ದೂರು ನೀಡಿದ್ದಾರೆ. ಸದ್ಯಕ್ಕೆ ಯಾರನ್ನೂ ಅರೆಸ್ಟ್ ಮಾಡಿಲ್ಲ, FIR ದಾಖಲಿಸುತ್ತೇವೆ. ಮರಣೋತ್ತರ ಪರೀಕ್ಷೆ ಬಳಿಕ ಮಾಹಿತಿ ಸಿಗಲಿದೆ. ಮೂವರು ಮನೆಯಲ್ಲಿದ್ದ ಬಗ್ಗೆ ಖಚಿತವಾಗಿ ಮಾಹಿತಿ ಇದೆ. ಪತ್ನಿ, ಮಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಕೊಲೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಮೂವರು ಇದ್ದರು. ಶಾರ್ಪ್ ವೆಪನ್ನಿಂದ ಹಿರಿದು ಕೊಲೆ ಮಾಡಲಾಗಿದೆ. ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಾಗಿದೆ ಎಂದು ತಿಳಿಸಿದರು.
Published on: Apr 20, 2025 10:02 PM
Latest Videos