‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ

Edited By:

Updated on: Mar 02, 2026 | 9:03 PM

‘ಭೀಮ ತೀರದಲ್ಲಿ’ ಚಿತ್ರ 2012ರಲ್ಲಿ ರಿಲೀಸ್ ಆಗಿತ್ತು. ದುನಿಯಾ ವಿಜಯ್ ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. 14 ವರ್ಷಗಳ ಬಳಿಕ ಈ ಸಿನಿಮಾವನ್ನು ರೀ-ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್, ನಿರ್ದೇಶಕ ಓಂ ಪ್ರಕಾಶ್ ರಾವ್ ಮಾತಾಡಿದ್ದಾರೆ.

ನೈಜ ಘಟನೆ ಆಧಾರಿತ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಅವರು ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. ಈಗ 14 ವರ್ಷಗಳ ಬಳಿಕ ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ಮಾತಾಡಿದ್ದಾರೆ. ‘ಈ ರೀತಿಯ ಸಿನಿಮಾವನ್ನು ನಮಗೆ ಈಗ ಮಾಡೋಕೆ ಆಗಲ್ಲ. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಮರು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮ ನಿರ್ದೇಶಕರು ತುಂಬಾ ಅಡ್ವಾನ್ಸ್ ಆಗಿ ಇಂಥ ಸಿನಿಮಾ ಮಾಡಿದ್ದರು. ನಮ್ಮ ಸಿನಿಮಾ ನೋಡಿ ಬೇರೆಯವರು ಸ್ಫೂರ್ತಿ ಪಡೆದಿದ್ದಾರೆ ಎನಿಸುತ್ತದೆ. ಇದು ರಿಯಲಿಸ್ಟಿಕ್ ಕಥೆ ಇರುವ ಸಿನಿಮಾ. ನಮ್ಮ ಇಡೀ ತಂಡ ಬಹಳ ಕಷ್ಟಪಟ್ಟು ಈ ಸಿನಿಮಾ ಮಾಡಿದ್ದೆವು’ ಎಂದು ನಿರ್ಮಾಪಕ ಅಣಜಿ ನಾಗರಾಜ್ (Anaji Nagaraj) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More