‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್

Edited By:

Updated on: Mar 03, 2026 | 8:46 AM

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ-ರಿಲೀಸ್ ಆಗುತ್ತಿದೆ. ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ತೆರೆಗೆ ತರುವ ಪ್ಲ್ಯಾನ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಓಂ ಪ್ರಕಾಶ್ ರಾವ್ ಅವರು ಮಾತನಾಡಿದ್​ದಾರೆ. ಈ ಚಿತ್ರಕ್ಕೂ ರವಿ ಬೆಳಗೆರೆ ಕಥೆಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More