‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್

Edited By:

Updated on: Mar 02, 2026 | 10:44 PM

ದರ್ಶನ್ ಜೊತೆ ಓಂ ಪ್ರಕಾಶ್ ರಾವ್ ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದ್ದು, ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಟ ದರ್ಶನ್ ಜೊತೆ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ (Darshan) ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ಅವರು ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಅವರು ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದ್ದು, ಆ ಪ್ರಯುಕ್ತ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಜೂನ್, ಜುಲೈ ಒಳಗೆ ದರ್ಶನ್ ಅವರು ಜೈಲಿನಿಂದ ಹೊರಗೆ ಬರುತ್ತಾರೆ. 3-4 ತಿಂಗಳಲ್ಲಿ ಅವರು ಬರುವುದು ಪಕ್ಕಾ. ಆ ನಂಬಿಕೆ ನನಗೆ ಇದೆ. ಈ ರೀತಿ ನಾನು ಮೊದಲು ತುಂಬಾ ಸಿನಿಮಾಗಳಿಗೆ ಹೇಳಿದ್ದೆ. ಈ ಸಿನಿಮಾ ಓಡಲ್ಲ ಬಿಟ್ಟುಬಿಡಿ ಅಂತ ಹೇಳಿದ್ದೆ. ಅದು ಹಾಗೆಯೇ ಆಗಿದೆ. ದೊಡ್ಡ ಲೆವಲ್​​ನಲ್ಲಿ ಹಿಟ್ ಆಗತ್ತೆ ಅಂತ ಕೂಡ ಹೇಳಿದ್ದೆ’ ಎಂದು ಓಂ ಪ್ರಕಾಶ್ ರಾವ್ (Om Prakash Rao) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More