ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜಕಾರಣಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಎಣ್ಣೆ ಸೀಗೇಕಾಯಿ ಸಂಬಂಧ. ಆದರೆ ವೈಯಕ್ತಿಕವಾಗಿ ಅವರಿಬ್ಬರ ಮಧ್ಯೆ ಗೌರವಾದರಗಳಿವೆ. 15 ನೇ ವಿಧಾನಸಭಾ ಅಧಿವೇಶನದ (Assembly session) ಕೊನೆಯ ದಿನವಾಗಿದ್ದ ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನಕ್ಕೆ ನೀಡಿರುವ ಕೊಡುಗೆಯನ್ನು ಮುಕ್ತಕಂಠದಿಂದ ಕೊಂಡಾಡಿದರು. ಸಿದ್ದರಾಮಯ್ಯ ದಾಖಲೆಯ 13 ಬಾರಿ ಬಜೆಟ್ ಮಂಡಿಸಿದನ್ನು ಸಹ ಮುಖ್ಯಮಂತ್ರಿಗಳು ಸ್ಮರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ