Last day in Session: ಸದನದ ಕಲಾಪಗಳಿಗೆ ಸಿದ್ದರಾಮಯ್ಯ ನೀಡಿರುವ ಕೊಡುಗೆ ಮುಕ್ತವಾಗಿ ಕೊಂಡಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 24, 2023 | 2:02 PM

ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನಕ್ಕೆ ನೀಡಿರುವ ಕೊಡುಗೆಯನ್ನು ಮುಕ್ತಕಂಠದಿಂದ ಕೊಂಡಾಡಿದರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜಕಾರಣಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಎಣ್ಣೆ ಸೀಗೇಕಾಯಿ ಸಂಬಂಧ. ಆದರೆ ವೈಯಕ್ತಿಕವಾಗಿ ಅವರಿಬ್ಬರ ಮಧ್ಯೆ ಗೌರವಾದರಗಳಿವೆ. 15 ನೇ ವಿಧಾನಸಭಾ ಅಧಿವೇಶನದ (Assembly session) ಕೊನೆಯ ದಿನವಾಗಿದ್ದ ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನಕ್ಕೆ ನೀಡಿರುವ ಕೊಡುಗೆಯನ್ನು ಮುಕ್ತಕಂಠದಿಂದ ಕೊಂಡಾಡಿದರು. ಸಿದ್ದರಾಮಯ್ಯ ದಾಖಲೆಯ 13 ಬಾರಿ ಬಜೆಟ್ ಮಂಡಿಸಿದನ್ನು ಸಹ ಮುಖ್ಯಮಂತ್ರಿಗಳು ಸ್ಮರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 24, 2023 02:02 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.