ಕ್ರಿಕೆಟ್ ದೇವರ ದ್ವಿಶತಕಕ್ಕೆ ಭರ್ತಿ 15 ವರ್ಷ; ಹೇಗಿತ್ತು ಗೊತ್ತಾ ಆ ಐತಿಹಾಸಿಕ ಕ್ಷಣ?
Sachin Tendulkar: ವಾಸ್ತವವಾಗಿ 2010 ರಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ಪ್ರವಾಸಕ್ಕೆ ಬಂದಿತ್ತು. ಏಕದಿನ ಸರಣಿಯ ಎರಡನೇ ಪಂದ್ಯ ಫೆಬ್ರವರಿ 24 ರಂದು ಗ್ವಾಲಿಯರ್‌ನ ಕ್ಯಾಪ್ಟನ್ ರೂಪ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು. ಅದೇ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 147 ಎಸೆತಗಳನ್ನು ಎದುರಿಸಿ 25 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ ಅಜೇಯ 200 ರನ್ಗಳ ಇನ್ನಿಂಗ್ಸ್ ಆಡಿದ್ದರು.
ಕ್ರಿಕೆಟ್ ದೇವರು ಎಂದೇ ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರಿಗೆ ಫೆಬ್ರವರಿ 24 ಬಹಳ ವಿಶೇಷವಾದ ದಿನ. ಈ ದಿನದಂದು ಬರೋಬ್ಬರಿ 15 ವರ್ಷಗಳ ಹಿಂದೆ ಅಂದರೆ ಫೆಬ್ರವರಿ 24, 2010 ರಂದು ಸಚಿನ್ ತೆಂಡೂಲ್ಕರ್ ಏಕದಿನ ಪಂದ್ಯದಲ್ಲಿ ದ್ವಿಶತಕ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು. ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸಚಿನ್ ತೆಂಡೂಲ್ಕರ್ ಈ ಸಾಧನೆ ಮಾಡಿದ್ದರು. ಇದೀಗ ಆ 15 ವರ್ಷಗಳ ಸ್ಮರಣೀಯ ಕ್ಷಣದ ವಿಡಿಯೋ ಹೊರಬಿದ್ದಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ವಾಸ್ತವವಾಗಿ 2010 ರಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ಪ್ರವಾಸಕ್ಕೆ ಬಂದಿತ್ತು. ಎರಡೂ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆದಿತ್ತು. ಸರಣಿಯ ಎರಡನೇ ಪಂದ್ಯ ಫೆಬ್ರವರಿ 24 ರಂದು ಗ್ವಾಲಿಯರ್‌ನ ಕ್ಯಾಪ್ಟನ್ ರೂಪ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು. ಅದೇ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 147 ಎಸೆತಗಳನ್ನು ಎದುರಿಸಿ 25 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ ಅಜೇಯ 200 ರನ್ಗಳ ಇನ್ನಿಂಗ್ಸ್ ಆಡಿದ್ದರು. ಇದರೊಂದಿಗೆ, ಅವರು ಏಕದಿನ ಪಂದ್ಯದಲ್ಲಿ ದ್ವಿಶತಕ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಸಚಿನ್ ಅವರ ಈ ದಾಖಲೆಯ ಇನ್ನಿಂಗ್ಸ್‌ನಿಂದಾಗಿ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 401 ರನ್ ಗಳಿಸಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು 42.5 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟ್ ಆಯಿತು. ಇದರಿಂದಾಗಿ ಭಾರತ ಪಂದ್ಯವನ್ನು 153 ರನ್‌ಗಳಿಂದ ಗೆದ್ದು ಸರಣಿಯನ್ನು ಗೆದ್ದುಕೊಂಡಿತು.