ಸುದೀಪ್ ಟ್ವೀಟ್ ಬೆನ್ನಲ್ಲೇ ವಾಲ್ಮೀಕಿ ಜಾತ್ರೆಗೆ ಆಹ್ವಾನ್ ನೀಡಿದ್ದ ಫೋಟೋ ವೈರಲ್
ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಲು ಹೋಗಿದ್ದ ಫೋಟೋ ವೈರಲ್ ಆಗಿದೆ. ಸುದೀಪ್ ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಕೈಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ಸುದೀಪ್ (Kichcha Sudeep) ಬರದೇ ಇದ್ದಿದ್ದಕ್ಕೆ ಅಭಿಮಾನಿಗಳು ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು. ‘ನನಗೆ ಆಯೋಜಕರಿಂದ ಆಹ್ವಾನ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮವನ್ನು ಯಾವಾಗಲೂ ತಪ್ಪಿಸಿಲ್ಲ’ ಎಂದು ಅವರು ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೇ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಲು ಹೋಗಿದ್ದ ಫೋಟೋ ವೈರಲ್ ಆಗಿದೆ. ಸುದೀಪ್ ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಕೈಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

