‘ಒಂದು ಸರಳ ಪ್ರೇಮ ಕಥೆ’ ಒಟಿಟಿ ರಿಲೀಸ್ ಬಗ್ಗೆ ಮಾಹಿತಿ ಕೊಟ್ಟ ಸಿಂಪಲ್ ಸುನಿ
ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಸೂಪರ್ ಹಿಟ್ ಆಯಿತು. ವಿನಯ್ ರಾಜ್ಕುಮಾರ್ ಹೀರೋ ಆಗಿ ನಟಿಸಿದ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಒಟಿಟಿ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ ಸುನಿ.
ನಿರ್ದೇಶಕ ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ‘ಒಂದು ಸರಳ ಪ್ರೇಮಕಥೆ’ ಸಿನಿಮಾ (Ondu Sarala Premakathe Movie) ಸೂಪರ್ ಹಿಟ್ ಆಯಿತು. ವಿನಯ್ ರಾಜ್ಕುಮಾರ್ ಹೀರೋ ಆಗಿ ನಟಿಸಿದ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಒಟಿಟಿ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ ಸುನಿ. ‘ಕನ್ನಡದ ಜೊತೆ ಉಳಿದ ನಾಲ್ಕು ಭಾಷೆಗೆ ಒಂದು ಸರಳ ಪ್ರೇಮ ಕಥೆ ಸಿನಿಮಾ ಕ್ಲಿಯರ್ ಕಟ್ ಆಗಿ ಡಬ್ ಆಗಿದೆ. ಆಯಾ ಭಾಷೆಯಲ್ಲಿ ಆಯಾ ಟೈಟಲ್ನಲ್ಲೇ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ’ ಎಂದು ಹೇಳಿದ್ದಾರೆ ಸುನಿ. ಸದ್ಯ ಸಿನಿಮಾ ರಿಲೀಸ್ ಆಗಿ 25 ದಿನಗಳು ಕಳೆದಿವೆ. 50ನೇ ದಿನಕ್ಕೆ ಚಿತ್ರವನ್ನು ಒಟಿಟಿಯಲ್ಲಿ ತರೋ ಆಲೋಚನೆ ಚಿತ್ರ ತಂಡಕ್ಕೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos