ಒಂದು ದಿನ ನನ್ನ ತಂದೆ ಸಿಎಂ ಆಗುವುದನ್ನು ನೋಡುತ್ತೇವೆ: ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ

Rakesh Nayak Manchi

Updated on: May 20, 2023 | 3:12 PM

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಜೊತೆ ಭಾರೀ ಪೈಪೋಟಿ ನಡೆಸಿದ ಡಿಕೆ ಶಿವಕುಮಾರ್​ ಡಿಸಿಎಂ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಬಗ್ಗೆ ಇವರ ಪುತ್ರಿ ಐಶ್ವರ್ಯಾ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ (Siddaramaiah) ಜೊತೆ ಭಾರೀ ಪೈಪೋಟಿ ನಡೆಸಿದ್ದ ಡಿಕೆ ಶಿವಕುಮಾರ್ (DK Shivakumar)​ ಡಿಸಿಎಂ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ಪುತ್ರಿ, ತಂದೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದು ಖುಷಿಯಾಗಿದೆ ಎಂದರು. ತಂದೆಯವರನ್ನು ಸಿಎಂ ಆಗಿ ನೋಡಲು ಇಷ್ಟಪಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ದಿನ ನೋಡುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.