ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಮಿರ್ಯಾಲಗುಡದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಡ್ಡಂಕಿ-ನಾರ್ಕೆಟ್‌ಪಲ್ಲಿ ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಅಪಘಾತಕ್ಕೆ ಕಾರಣವಾಯಿತು. ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸಮ್ಮಕುಂಟ ತಾಂಡಾದ ಮೇಗಾವತ್ ಮಂಥ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರು ಕಳವಳ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹೈದರಾಬಾದ್, ಏಪ್ರಿಲ್ 30: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗುಡ ಬೈಪಾಸ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತ (Accident) ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಇದ್ದಕ್ಕಿದ್ದಂತೆ ಅಡ್ಡ ಬಂದ ಹಿನ್ನೆಲೆಯಲ್ಲಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ಘಟನೆಯ ವೀಡಿಯೊದಲ್ಲಿ ಬೈಕ್ ಸವಾರ ತಪ್ಪು ಬದಿಯಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿರುವಾಗ ವೇಗವಾಗಿ ಬಂದ ಕಾರು ಅವನಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us