ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ, ಅಡುಗೆ ಸಿಬ್ಬಂದಿ

ಮಹೇಶ್ ಇ, ಭೂಮನಹಳ್ಳಿ Edited By: ವಿವೇಕ ಬಿರಾದಾರ

Updated on: Mar 18, 2025 | 1:22 PM

ಶಿರಾ ತಾಲೂಕಿನ ಮದ್ದೆವಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಬ್ಬಳೇ ವಿದ್ಯಾರ್ಥಿನಿ ಮಾನಸ ಓದುತ್ತಿದ್ದಾಳೆ. ಅವಳಿಗಾಗಿ ಒಬ್ಬ ಶಿಕ್ಷಕಿ ಮತ್ತು ಅಡುಗೆಯವರನ್ನು ನೇಮಿಸಲಾಗಿದೆ. ಶಾಲೆ ಮುಚ್ಚುವುದನ್ನು ತಡೆಯಲು ಮಾನಸನ ತಾಯಿ ತನ್ನ ಮಗಳನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದಾರೆ. ಇದು ಸರ್ಕಾರಿ ಶಾಲೆಗಳನ್ನು ಉಳಿಸುವ ಒಂದು ಅದ್ಭುತ ಪ್ರಯತ್ನ.

ತುಮಕೂರು, ಮಾರ್ಚ್​ 18: ಶಿರಾ (Sira) ತಾಲೂಕಿನ ಮದ್ದೆವಳ್ಳಿ ಗ್ರಾಮದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಬ್ಬೇ ಒಬ್ಬಳು ವಿದ್ಯಾರ್ಥಿನಿ ವ್ಯಾಸಾಂಗ ಮಾಡುತ್ತಿದ್ದಾರೆ. ಒಂದನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮಾನಸರಿಗೆ ಪಾಠ ಮಾಡಲು ಓರ್ವ ಶಿಕ್ಷಕಿಯನ್ನು ನೇಮಿಸಲಾಗಿದೆ. ಹಾಗೇ, ಮಧ್ಯಾಹ್ನದ ಬಿಸಿ ಊಟಕ್ಕಾಗಿ ಅಡುಗೆ ಸಿಬ್ಬಂದಿಯನ್ನೂ ಕೂಡ ಸರ್ಕಾರ ನೇಮಿಸಿದೆ. ವಿದ್ಯಾರ್ಥಿಗಳು ಇಲ್ಲದೇ ಶಾಲೆ ಮುಚ್ಚುವ ಹಂತಕ್ಕೆ ಹೋಗಿತ್ತು. ಕೊನೆಗೆ ಓರ್ವ ವಿದ್ಯಾರ್ಥಿನಿ ದಾಖಲಾದ ಹಿನ್ನೆಲೆಯಲ್ಲಿ ಶಾಲೆಯನ್ನು ತೆರೆಯಲಾಗಿದೆ. ವಿದ್ಯಾರ್ಥಿನಿ ಮಾಸನ ಅಡುಗೆ ಸಿಬ್ಬಂದಿ ಮಗಳಾಗಿದ್ದಾರೆ. ತಮ್ಮ ಮಗಳನ್ನು ಶಾಲೆಗೆ ದಾಖಲಿಸಿ, ಸರ್ಕಾರಿ ಶಾಲೆಯನ್ನು ಉಳಿಸುವ ಪ್ರಯತ್ನವನ್ನು ಮಾನಸ ತಾಯಿ ಮಾಡುತ್ತಿದ್ದಾರೆ .

Loading...
Unable to load recommendations.
Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...