ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು, ಅವಶೇಷಗಳಡಿ ಸಿಲುಕಿದ ನಾಲ್ವರಿಗಾಗಿ ಹುಡುಕಾಟ

Updated on: Jul 08, 2026 | 10:07 PM

ದೆಹಲಿಯ ರೋಹಿಣಿ ಸೆಕ್ಟರ್ 16 ರಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಭೀಕರ ದುರಂತದಲ್ಲಿ 41 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಟ್ಟಡದ ಮಾಲೀಕ ಸೇರಿದಂತೆ 4 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ರಾಮ್ ಎಂಬ 41 ವರ್ಷದ ವ್ಯಕ್ತಿ ಕಟ್ಟಡದ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಟ್ಟಡದ ಅವಶೇಷಗಳು ಅವರ ಮೇಲೆ ಬಿದ್ದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನವದೆಹಲಿ, ಜುಲೈ 8: ದೆಹಲಿಯಲ್ಲಿ (Delhi Rains) ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ಮಧ್ಯಾಹ್ನ ದೆಹಲಿಯ ರೋಹಿಣಿ ಸೆಕ್ಟರ್ 16 ರಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಭೀಕರ ದುರಂತದಲ್ಲಿ 41 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಟ್ಟಡದ ಮಾಲೀಕ ಸೇರಿದಂತೆ 4 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ರಾಮ್ ಎಂಬ 41 ವರ್ಷದ ವ್ಯಕ್ತಿ ಕಟ್ಟಡದ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಟ್ಟಡದ ಅವಶೇಷಗಳು ಅವರ ಮೇಲೆ ಬಿದ್ದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

(Video Source: PTI)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 08, 2026 10:06 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More