AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ, ಕರಾವಳಿ ಉದ್ವಿಗ್ನ

ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ, ಕರಾವಳಿ ಉದ್ವಿಗ್ನ

ರಮೇಶ್ ಬಿ. ಜವಳಗೇರಾ
|

Updated on: May 01, 2025 | 10:36 PM

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇಡಿಗೆ ಸೇಡು ಮುಂದುವರಿದಿದೆ. ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಈ ಘಟನೆ ನಡೆದಿದೆ. ಇನ್ನು ಕೊಲೆಯಾದ ಸುಹಾಸ್ ಶೆಟ್ಟಿ ಬಿಜೆಪಿ ಕಾರ್ಯಕರ್ತ ಪ್ರವಿಣ್ ನೆಟ್ಟಾರ್​ ಹತ್ಯೆಗೆ ಪ್ರತಿಕಾರವಾಗಿ 2022ರ ಜುಲೈ 28ರಂದು ನಡೆದಿದ್ದ ಫಾಜಿಲ್ ಕೊಲೆ ಪ್ರಕರಣ ಆರೋಪಿಯಾಗಿದ್ದ.

ಮಂಗಳೂರು, (ಮೇ 01): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇಡಿಗೆ ಸೇಡು ಮುಂದುವರಿದಿದೆ. ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಈ ಘಟನೆ ನಡೆದಿದೆ. ಇನ್ನು ಕೊಲೆಯಾದ ಸುಹಾಸ್ ಶೆಟ್ಟಿ ಬಿಜೆಪಿ ಕಾರ್ಯಕರ್ತ ಪ್ರವಿಣ್ ನೆಟ್ಟಾರ್​ ಹತ್ಯೆಗೆ ಪ್ರತಿಕಾರವಾಗಿ 2022ರ ಜುಲೈ 28ರಂದು ನಡೆದಿದ್ದ ಫಾಜಿಲ್ ಕೊಲೆ ಪ್ರಕರಣ ಆರೋಪಿಯಾಗಿದ್ದ. ಇದೇ ಸೇಡಿಗೆ ಇದೀಗ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿದೆ. ಈ ಕೊಲೆಯಿಂದಾಗಿ ಮತ್ತೆ ಕರಾವಳಿ ಉದ್ವಿಗ್ನಗೊಂಡಿದ್ದು, ಮುಂಜಾಗ್ರತಾಕ್ರಮವಾಗಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಮಂಗಳೂರು ಹಲವೆಡೆ ನಾಕಾಬಂದಿ ಹಾಕಲಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.