ಬೆಂಗಳೂರಿನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಸ್ಟೇಡಿಯಂ: ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಚಿನ್ನಸ್ವಾಮಿ ಸ್ಟೇಡಿಯಂ ರೀತಿ ಬೆಂಗಳೂರು (Bengaluru) ಹೊರವಲಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರೀಡಾಂಗಣ (international stadium) ನಿರ್ಮಾಣವಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಇದೇ ಮೇ 23ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಹೀಗಾಗಿ ಸಚಿವ ಜಮೀರ್ ಅಹ್ಮದ್ ಖಾನ್ , ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲನೆ ನಡೆಸಿದರು.
ಬೆಂಗಳೂರು, (ಮೇ 20): M ಚಿನ್ನಸ್ವಾಮಿ ಸ್ಟೇಡಿಯಂ ರೀತಿ ಬೆಂಗಳೂರು (Bengaluru) ಹೊರವಲಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ (international stadium) ನಿರ್ಮಾಣವಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಇದೇ ಮೇ 23ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಹೀಗಾಗಿ ಸಚಿವ ಜಮೀರ್ ಅಹ್ಮದ್ ಖಾನ್ , ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲನೆ ನಡೆಸಿದರು.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಯಲ್ಲಿ 100 ಎಕರೆ ಜಾಗದಲ್ಲಿ ಸುಮಾರು 900 ಕೋಟಿ ವೆಚ್ಚದಲ್ಲಿ 80 ಸಾವಿರ ಆಸನ ಸಾಮರ್ಥ್ಯದ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದೆ. ಇನ್ನು ಈ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಟೀಂ ಇಂಡಿಯಾ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಜಾವಗಲ್ ಶ್ರೀನಾಥ್ ಹಾಗೂ ವೆಂಕಟೇಶ್ ಪ್ರಸಾದ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಕ್ರಿಕೆಟ್ ದೇವರು ಎಂದೇ ಕರೆಯಿಸಿಕೊಂಡಿರುವ ಸಚಿವ ತೆಂಡೂಲ್ಕರ್ ಅವರಿಗೂ ಸಹ ಆಹ್ವಾನ ನೀಡಲಾಗಿದ್ದು, ಅವರ ಆಗಮನ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಸ್ವತಃ ಜಮೀರ್ ಅಹ್ಮದ್ ಖಾನ್ ಈಗಾಗಲೇ ಮಾಹಿತಿ ನೀಡಿದ್ದಾರೆ.


