ಯಾರು ಬಂದ್ರೂ ಬದಲಾಗದ ಪರಪ್ಪನ ಅಗ್ರಹಾರ ಜೈಲು: ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆ
ಮೊನ್ನೇ ಅಷ್ಟೇ ಸಿಸಿಬಿ ದಾಳಿ ಮಾಡಿದ್ದ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಸಿಕ್ಕಿತ್ತು. ಇನ್ನು ಅದೇ ದಿನ ಜೈಲು ಅಧಿಕಾರಿಗಳು ದಾಳಿ ಮಾಡಿದ್ದಾಗ ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ. ದೇವರ ಫೋಟೊ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಯಾರು ಈ ಮೊಬೈಲ್ ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.
ಬೆಂಗಳೂರು, (ಆಗಸ್ಟ್ 17): ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ದಿನಾಲೂ ಸುದ್ದಿಯಲ್ಲಿರುತ್ತೆ.ಕಾರಣ ವಿಐಪಿ ಖೈದಿಗಳ ಸಂಖ್ಯೆ ಜಾಸ್ತಿ ಆಗಿರೋದು.ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಮತ್ತೆ ಸದ್ದು ಮಾಡಿದ್ದು, ಫೋನ್,ಪೆನ್ ಡ್ರೈವ್ ಇಟ್ಟುಕೊಂಡು ಸಿಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್ ಪತ್ತೆಯಾಗಿದ್ದು, ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ.
ಹೌದು…ಮೊನ್ನೇ ಅಷ್ಟೇ ಸಿಸಿಬಿ ದಾಳಿ ಮಾಡಿದ್ದ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಸಿಕ್ಕಿತ್ತು. ಇನ್ನು ಅದೇ ದಿನ ಜೈಲು ಅಧಿಕಾರಿಗಳು ದಾಳಿ ಮಾಡಿದ್ದಾಗ ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ. ದೇವರ ಫೋಟೊ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಯಾರು ಈ ಮೊಬೈಲ್ ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.
ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ

