ಯಾರು ಬಂದ್ರೂ ಬದಲಾಗದ ಪರಪ್ಪನ ಅಗ್ರಹಾರ ಜೈಲು: ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆ

Updated on: Aug 17, 2026 | 3:23 PM

ಮೊನ್ನೇ ಅಷ್ಟೇ ಸಿಸಿಬಿ ದಾಳಿ ಮಾಡಿದ್ದ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಸಿಕ್ಕಿತ್ತು. ಇನ್ನು ಅದೇ ದಿನ ಜೈಲು ಅಧಿಕಾರಿಗಳು ದಾಳಿ ಮಾಡಿದ್ದಾಗ ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ. ದೇವರ ಫೋಟೊ‌ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ FIR​ ದಾಖಲಾಗಿದ್ದು, ಯಾರು ಈ ಮೊಬೈಲ್ ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.

ಬೆಂಗಳೂರು, (ಆಗಸ್ಟ್ 17): ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ದಿನಾಲೂ ಸುದ್ದಿಯಲ್ಲಿರುತ್ತೆ.ಕಾರಣ ವಿಐಪಿ ಖೈದಿಗಳ ಸಂಖ್ಯೆ ಜಾಸ್ತಿ ಆಗಿರೋದು.ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಮತ್ತೆ ಸದ್ದು ಮಾಡಿದ್ದು, ಫೋನ್,ಪೆನ್ ಡ್ರೈವ್ ಇಟ್ಟುಕೊಂಡು ಸಿಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್ ಪತ್ತೆಯಾಗಿದ್ದು, ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ.

ಹೌದು…ಮೊನ್ನೇ ಅಷ್ಟೇ ಸಿಸಿಬಿ ದಾಳಿ ಮಾಡಿದ್ದ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಸಿಕ್ಕಿತ್ತು. ಇನ್ನು ಅದೇ ದಿನ ಜೈಲು ಅಧಿಕಾರಿಗಳು ದಾಳಿ ಮಾಡಿದ್ದಾಗ ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ. ದೇವರ ಫೋಟೊ‌ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ FIR​ ದಾಖಲಾಗಿದ್ದು, ಯಾರು ಈ ಮೊಬೈಲ್ ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More