CM Siddaramaiah Press Meet: ಸರ್ಕಾರಕ್ಕೆ ಒಂದು ವರ್ಷ, ಸಿಎಂ ಸಿದ್ದರಾಮಯ್ಯ ಸಂವಾದ ಲೈವ್

Updated on: May 20, 2024 | 12:04 PM

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ಒಂದು ವರ್ಷ ತುಂಬಿದೆ. ಲೋಕಸಭಾ ಚುನಾವಣಾ ನೀತಿ ಸಂಹಿತೆ ವರ್ಷದ ಸಂಭ್ರಮಕ್ಕೆ ಅಡ್ಡಿಯಾಗಿದ್ದರೆ, ವಿಪಕ್ಷ ಬಿಜೆಪಿ ಇಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ವ್ಯಾಪಿ ಹೋರಾಟ ರೂಪಿಸಿದೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯನವರು ಬೆಂಗಳೂರು ಪ್ರೆಸ್ ಕ್ಲಬ್​ನಲ್ಲಿ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ಬೆಂಗಳೂರು, ಮೇ.20: ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಸಂವಾದ ನಡೆಸಲಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಲೋಕಸಭಾ ಚುನಾವಣೆ ಮತ್ತು ರಾಜ್ಯ ಸರ್ಕಾರ ಒಂದು ವರ್ಷದ ಪೂರೈಸಿರೋ ಹಿನ್ನೆಲೆಯಲ್ಲಿ ಮಾತುಕತೆ ನಡೆಯಲಿದೆ.

ಗ್ಯಾರಂಟಿ ಘೋಷಣೆಗಳೊಂದಿಗೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಪಂಚ ಗ್ಯಾರಂಟಿಗಳ ಅನುಷ್ಠಾನದ ಹುಮ್ಮಸ್ಸಿನ್ನಲ್ಲೇ ಲೋಕಸಭಾ ಚುನಾವಣೆ ಎದುರಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಅದೇ ಲೋಕಸಭಾ ಚುನಾವಣೆಯ ನೀತಿ ಸಂಹಿತೆಯೇ ವರ್ಷದ ಸಾಧನೆಯನ್ನು ಸಂಭ್ರಮಿಸಲು ಅಡ್ಡಿಯಾಗಿದೆ. ಹೀಗಾಗಿ ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಧ್ಯಮದ ಸಂವಾದದ ಮೂಲಕ ತಮ್ಮ ನೇತೃತ್ವದ ಸರ್ಕಾರದ ಸಾಧನೆಯ ಬಗ್ಗೆ ಮಾತಾಡುವುದಕ್ಕಷ್ಟೇ ವರ್ಷದ ಕಾರ್ಯಕ್ರಮ ಸೀಮಿತವಾಗಿದೆ. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಒಂದು ವರ್ಷದ ಸಂಭ್ರಮಾಚರಣೆಯ ಕಾರ್ಯಕ್ರಮಗಳು ನಡೆಯಲಿವೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: May 20, 2024 11:59 AM