ವಿಶ್ವ ಚಾಂಪಿಯನ್ ಪಟ್ಟಕ್ಕೆ ಒಂದು ವರ್ಷ
ನಾಯಕ ರೋಹಿತ್ ಶರ್ಮಾ 9 ರನ್ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 76 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.
ಭಾರತ ತಂಡವು 2ನೇ ಟಿ20 ವಿಶ್ವಕಪ್ ಗೆದ್ದು ಒಂದು ವರ್ಷ ಪೂರ್ಣಗೊಂಡಿದೆ. ಜೂನ್ 29, 2024 ರಂದು ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.
ನಾಯಕ ರೋಹಿತ್ ಶರ್ಮಾ 9 ರನ್ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 76 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.
177 ರನ್ಗಳ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 16 ಓವರ್ಗಳಲ್ಲಿ 151 ರನ್ ಕಲೆಹಾಕಿದ್ದರು. ಕೊನೆಯ 24 ಎಸೆತಗಳಲ್ಲಿ ಆಫ್ರಿಕನ್ನರ ಮುಂದಿದ್ದು ಕೇವಲ 26 ರನ್ಗಳು ಮಾತ್ರ. ಈ ವೇಳೆ ದಾಳಿಗಿಳಿದ ಹಾರ್ದಿಕ್ ಪಾಂಡ್ಯ 17ನೇ ಓವರ್ನಲ್ಲಿ ಕೇವಲ 4 ರನ್ ನೀಡಿ ಡೇಂಜರಸ್ ಹೆನ್ರಿಕ್ ಕ್ಲಾಸೆನ್ (52) ವಿಕೆಟ್ ಪಡೆದರು. ಇನ್ನು 18ನೇ ಓವರ್ನಲ್ಲಿ ಬುಮ್ರಾ ನೀಡಿದ್ದು ಕೇವಲ 2 ರನ್ ಮಾತ್ರ.
19ನೇ ಓವರ್ ಎಸೆದ ಅರ್ಷದೀಪ್ ಸಿಂಗ್ ಕೇವಲ 4 ರನ್ ಮಾತ್ರ ಬಿಟ್ಟುಕೊಟ್ಟರು. ಪರಿಣಾಮ ಕೊನೆಯ ಓವರ್ನಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಗೆಲ್ಲಲು 16 ರನ್ಗಳು ಬೇಕಿದ್ದವು. ಅಂತಿಮ ಓವರ್ ಎಸೆದ ಹಾರ್ದಿಕ್ ಪಾಂಡ್ಯ ಕೇವಲ 8 ರನ್ ನೀಡಿ 2 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾಗೆ 7 ರನ್ಗಳ ರೋಚಕ ಜಯ ತಂದುಕೊಟ್ಟರು. ಈ ಮೂಲಕ ಭಾರತ ತಂಡವು 2007ರ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಈ ಐತಿಹಾಸಿಕ ಸಾಧನೆಗೆ ಇಂದು ಒಂದು ವರ್ಷ ತುಂಬಿದೆ.
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ