AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೇಣುಕಾಸ್ವಾಮಿ ಹತ್ಯೆಗೆ 1 ವರ್ಷ; ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

Video: ರೇಣುಕಾಸ್ವಾಮಿ ಹತ್ಯೆಗೆ 1 ವರ್ಷ; ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

ಅಕ್ಷತಾ ವರ್ಕಾಡಿ
|

Updated on: Jun 08, 2025 | 12:13 PM

ರೇಣುಕಾ ಸ್ವಾಮಿ ಹತ್ಯೆಯಾಗಿ ಒಂದು ವರ್ಷ ಪೂರ್ಣಗೊಂಡಿದೆ. ಅವರ ಕುಟುಂಬಸ್ಥರು ಭಾವಚಿತ್ರಕ್ಕೆ ನಮನ ಸಲ್ಲಿಸಿ, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪವಿತ್ರಾ ಗೌಡ ಮತ್ತು ದರ್ಶನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿಯುತ್ತಿದೆ. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ಇಂದಿಗೆ(ಜೂನ್​​ 08) ಒಂದು ವರ್ಷ ಕಳೆದಿದೆ. ಇಂದು ರೇಣುಕಾಸ್ವಾಮಿಯ ಭಾವಚಿತ್ರಕ್ಕೆ ಪತ್ನಿ ಪುತ್ರ ಸೇರಿ ಕುಟುಂಬಸ್ಥರು ನಮನ ಸಲ್ಲಿಸಿದ್ದಾರೆ. ಈ ವೇಳೆ ಮಾಧ್ಯಮದೊಂದಿಗೆ ಮಾತಾನಾಡಿದ ಪೋಷಕರು ರೇಣುಕಾಸ್ವಾಮಿ ನೆನೆದು ಕಣ್ಣೀರಿಟ್ಟಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ ನಟ ದರ್ಶನ್​ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ.  2024 ರ ಜೂನ್​​​ 11ರಂದು ನಟ ದರ್ಶನ್‌ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದರು. ಮೈಸೂರಿನ ನಿವಾಸದಲ್ಲಿ ನಟ ದರ್ಶನ್‌ ಬಂಧನಕ್ಕೊಳಗಾಗಿದ್ದು, ಈ ಪ್ರಕರಣ ಇಡೀ ಸ್ಯಾಂಡಲ್‌ವುಡ್‌ ಸೇರಿದಂತೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು.

ಇದನ್ನೂ ಓದಿ:  Bengaluru Stampede: ನನ್ನ ಮಗನ ಸಾವಿಗೆ ಸರ್ಕಾರವೇ ಹೊಣೆ, ಪೊಲೀಸರದ್ದೇನೂ ತಪ್ಪಿಲ್ಲ: ಡಿಟಿ ಲಕ್ಷ್ಮಣ, ಭೂಮಿಕ್ ತಂದೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ