ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
Renuka Swamy murder: ರೇಣುಕಾ ಸ್ವಾಮಿ ಕೊಲೆಯಾಗಿ ಇಂದಿಗೆ ಒಂದು ವರ್ಷ. ಪ್ರಕರಣದಲ್ಲಿ ಆರೋಪಿಗಳಾಗಿರುವ ಎಲ್ಲರೂ ಜಾಮೀನಿನ ಮೇಲೆ ಹೊರಗೆ ಬಂದಿದ್ದು, ಎಲ್ಲರೂ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ದರ್ಶನ್ ಸಿನಿಮಾಗಳಲ್ಲಿ ಬ್ಯುಸಿ, ಇತ್ತೀಚೆಗೆ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಸಹ ಆಚರಿಸಿದ್ದಾರೆ. ಪವಿತ್ರಾ ತಮ್ಮ ಉದ್ಯಮದಲ್ಲಿ ಬ್ಯುಸಿಯಾಗಿದ್ದಾರೆ.
ದರ್ಶನ್ (Darshan), ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳು ಕೊಂದಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾ ಸ್ವಾಮಿ ಮೃತಪಟ್ಟು ಇಂದಿಗೆ (ಜೂನ್ 08) ಒಂದು ವರ್ಷ. ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಲ್ಲರೂ ಜಾಮೀನಿನ ಮೇಲೆ ಹೊರಗೆ ಬಂದಿದ್ದು, ಎಲ್ಲರೂ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ದರ್ಶನ್ ಸಿನಿಮಾಗಳಲ್ಲಿ ಬ್ಯುಸಿ, ಇತ್ತೀಚೆಗೆ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಸಹ ಆಚರಿಸಿದ್ದಾರೆ. ಪವಿತ್ರಾ ತಮ್ಮ ಉದ್ಯಮದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರೇಣುಕಾ ಸ್ವಾಮಿ ಕುಟುಂಬದವರು ಆ ನೋವಿನಿಂದ ಇನ್ನೂ ಹೊರಬಂದಿಲ್ಲ. ರೇಣುಕಾ ಸ್ವಾಮಿ ಕುಟುಂಬದವರು ಇಂದು ರೇಣುಕಾ ಸ್ವಾಮಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮತ್ತೊಮ್ಮೆ ಆತನ ನೆನಪು ಮಾಡಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos