ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ದರ: ಕೆಜಿಗೆ ನೂರು ರೂಪಾಯಿಯತ್ತ ಮುನ್ನುಗ್ಗುತ್ತಿದೆ ಬೆಲೆ!
ಕರ್ನಾಟಕದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆಯಾಗಿದ್ದು, ಗ್ರಾಹಕರ ಕಣ್ಣೀರಿಗೆ ಕಾರಣವಾಗಿದೆ. ಪ್ರಸ್ತುತ ಕೆ.ಜಿ.ಗೆ 60-75 ರೂಪಾಯಿ ತಲುಪಿರುವ ದರ ಕೆಲವೇ ದಿನಗಳಲ್ಲಿ 100ರ ಗಡಿ ಮುಟ್ಟುವ ಸಾಧ್ಯತೆಯಿದೆ. ಮಳೆ ಕೊರತೆ ಮತ್ತು ಇಳುವರಿ ಕುಸಿತದಿಂದಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಸೃಷ್ಟಿಯಾಗಿದೆ. ಕೋಲ್ಡ್ ಸ್ಟೋರೇಜ್ ಕೊರತೆಯೂ ಸಮಸ್ಯೆಗೆ ಕಾರಣ ಎನ್ನಲಾಗಿದೆ.
ಬೆಂಗಳೂರು, ಆಗಸ್ಟ್ 25: ಕರ್ನಾಟಕದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, ಸಾಮಾನ್ಯ ಜನರ ಜೇಬಿಗೆ ಕತ್ತರಿ ಬಿದ್ದಿದೆ. ಕೆ.ಜಿ. ಈರುಳ್ಳಿ ಬೆಲೆ ಪ್ರಸ್ತುತ 60ರಿಂದ 75ಕ್ಕೆ ತಲುಪಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ಈರುಳ್ಳಿ ದರ 100ರ ಗಡಿ ದಾಟುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ. ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಮಳೆ ಕೊರತೆಯಿಂದಾಗಿ ಈರುಳ್ಳಿ ಇಳುವರಿಯಲ್ಲಿ ಉಂಟಾಗಿರುವ ಕುಸಿತ. ಮಾರುಕಟ್ಟೆಗೆ ಈರುಳ್ಳಿ ಪೂರೈಕೆ ಕಡಿಮೆಯಾಗಿದ್ದು, ಅಭಾವ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಸೂಕ್ತ ಕೋಲ್ಡ್ ಸ್ಟೋರೇಜ್‌ಗಳ ಕೊರತೆಯೂ ಈರುಳ್ಳಿ ಸಂಗ್ರಹಣೆ ಮತ್ತು ಬೆಲೆ ಸ್ಥಿರತೆಯನ್ನು ಕಾಪಾಡುವಲ್ಲಿ ದೊಡ್ಡ ಸವಾಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

