ನನ್ನ 15-ನಿಮಿಷದ ವಿಡಿಯೋದಲ್ಲಿ 30 ಸೆಕೆಂಡ್ ಅವಧಿಯ ಮಾತುಗಳನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ: ಅರುಣ್ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Mar 14, 2023 | 7:57 PM

ಅಸಲಿಗೆ ಅದು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಾಡಿರುವ 15-ನಿಮಿಷದ ವಿಡಿಯೋ ಆಗಿದೆ. ಆದರೆ ಅದರಲ್ಲಿ ಕೇವಲ 30 ಸೆಕೆಂಡ್ ವಿಡಿಯೋವನ್ನು ಮಾತ್ರ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ. ಅದನ್ನು ಮಾಡಿದ್ದು ಯಾರು ಅಂತ ಗೊತ್ತಾಗಿಲ್ಲ ಎಂದು ಅರುಣ್ ಸೋಮಣ್ಣ ಹೇಳಿದರು.

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ವಸತಿ ಸಚಿವರಾಗಿರುವ ವಿ ಸೋಮಣ್ಣ (V Somanna) ಅವರ ಮಗ ಅರುಣ್ ಸೋಮಣ್ಣ (Arun Somanna) ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಬಗ್ಗೆ ಏಕವಚನದಲ್ಲಿ ಮಾತಾಡಿರುವ ವಿಡಿಯೋ ವೈರಲ್ ಆಗಿದೆ. ಅ ವಿಡಿಯೋ ಬಗ್ಗೆ ಅರುಣ್ ಸೋಮಣ್ಣ ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡುವಾಗ ಸ್ಪಷ್ಟೀಕರಣ ನೀಡಿದ್ದಾರೆ. ಅಸಲಿಗೆ ಅದು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಾಡಿರುವ 15-ನಿಮಿಷದ ವಿಡಿಯೋ ಆಗಿದೆ. ಆದರೆ ಅದರಲ್ಲಿ ಕೇವಲ 30 ಸೆಕೆಂಡ್ ವಿಡಿಯೋವನ್ನು ಮಾತ್ರ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ. ಅದನ್ನು ಮಾಡಿದ್ದು ಯಾರು ಅಂತ ಗೊತ್ತಾಗಿಲ್ಲ ಎಂದು ಅರುಣ್ ಸೋಮಣ್ಣ ಹೇಳಿದರು. ತಾನು ರಾಜಕಾರಣಿಯ ಮಗ ನಿಜ ಆದರೆ ರಾಜಕಾರಣಿಯಾಗಿ ಸಾಯಬೇಕೆಂಬ ಉಮೇದಿ ತನಗಿಲ್ಲ ಎಂದು ಅರುಣ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.