ಪ್ರಿಯಾಂಕ್ ಖರ್ಗೆ ಹೇಳಿದ್ದು ಗಣನೆಗೆ ಬರಲ್ಲ, ಸಿಎಂ ಮತ್ತು ನಾನು ಹೇಳೋದು ಮಾತ್ರ ಅಧಿಕೃತ: ಜಿ ಪರಮೇಶ್ವರ್, ಗೃಹ ಸಚಿವ
ಮುಖ್ಯಮಂತ್ರಿ ಮತ್ತು ತಾನು ಅಧಿಕೃತ ಎಫ್ ಎಸ್ ಎಲ್ ವರದಿ ಬಂದ ಬಳಿಕ ಅದರ ಆಧಾರದ ಮೇಲೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೆವು ಮತ್ತು ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಹೇಳಿದರು. ಪೂರ್ತಿ ಘಟನೆಯಲ್ಲಿ ಪೊಲೀಸರಿಂದ ಕರ್ತವ್ಯಲೋಪ ಜರುಗಿದ್ದರೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರು: ರಾಜ್ಯಸಭೆಗೆ ಡಾ ಸಯ್ಯದ್ ನಾಸೀರ್ ಹುಸ್ಸೇನ್ ಆಯ್ಕೆಯಾದ ಸಂದರ್ಭದಲ್ಲಿ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ಈಗ ಸಾಬೀತಾಗಿದೆ ಮತ್ತು ಕೂಗಿದವರನ್ನು ಬಂಧಿಸಲಾಗಿದೆ. ಆದರೆ, ಎಫ್ ಎಸ್ ಎಲ್ ವರದಿ ಲಭ್ಯವಾಗುವ ಮೊದಲೇ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಯಾರೂ ಹಾಗೆ ಕೂಗಿಲ್ಲ, ಬಿಜೆಪಿ ನಾಯಕರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಮತ್ತು ದ್ವೇಷ ಬಿತ್ತುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದರು. ಖರ್ಗೆ ಮಾತಾಡಿದ್ದನ್ನು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಗಮನಕ್ಕೆ ತಂದಾಗ ಅವರು ತಮ್ಮ ಸಂಪುಟ ಸಹೋದ್ಯೋಗಿಯ (cabinet colleague) ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇಂಥ ಸೂಕ್ಷ್ಮ ವಿಷಯಗಳಲ್ಲಿ ಬೇರೆ ಯಾವುದೇ ಸಚಿವ ಹೇಳುವುದು ಗಣನೆಗೆ ಬರಲ್ಲ, ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಟಾಪ್ ಪೊಲೀಸ್ ಅಧಿಕಾರಿಗಳು ನೀಡುವ ಹೇಳಿಕೆಗಳು ಅಧಿಕೃತ ಅನಿಸಿಕೊಳ್ಳುತ್ತವೆ ಎಂದು ಹೇಳಿದರು. ಮುಖ್ಯಮಂತ್ರಿ ಮತ್ತು ತಾನು ಅಧಿಕೃತ ಎಫ್ ಎಸ್ ಎಲ್ ವರದಿ ಬಂದ ಬಳಿಕ ಅದರ ಆಧಾರದ ಮೇಲೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೆವು ಮತ್ತು ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಹೇಳಿದರು. ಪೂರ್ತಿ ಘಟನೆಯಲ್ಲಿ ಪೊಲೀಸರಿಂದ ಕರ್ತವ್ಯಲೋಪ ಜರುಗಿದ್ದರೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು: ಬಿಜೆಪಿ ಕಿಡಿ