AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ನಾಯಕರ ಮೇಲೆನೇ ಆಗೋದು ಇಡಿ ದಾಳಿ: ನನ್ನ ಮೇಲೂ ಆಗಬಹುದು ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ನಾಯಕರ ಮೇಲೆನೇ ಆಗೋದು ಇಡಿ ದಾಳಿ: ನನ್ನ ಮೇಲೂ ಆಗಬಹುದು ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಣಪತಿ ಶರ್ಮಾ
|

Updated on: Jun 24, 2026 | 12:12 PM

Share

ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇಡಿ (ಜಾರಿ ನಿರ್ದೇಶನಾಲಯ) ದಾಳಿಗಳು ಹೆಚ್ಚಾಗಿ ರಾಜಕೀಯ ಪ್ರೇರಿತವಾಗಿವೆ ಎಂದು ಆರೋಪಿಸಿದ್ದಾರೆ. ಇಡೀ ದೇಶದಲ್ಲಿ ಕಳೆದ 12 ವರ್ಷಗಳಲ್ಲಿ ನಡೆದ ಸಾವಿರಾರು ದಾಳಿಗಳಲ್ಲಿ ಶಿಕ್ಷೆಯ ಪ್ರಮಾಣ ಶೇ 2 ಕ್ಕಿಂತಲೂ ಕಡಿಮೆ ಇದೆ ಎಂದು ಅವರು ಅಂಕಿಅಂಶಗಳನ್ನು ಉಲ್ಲೇಖಿಸಿದ್ದಾರೆ. ತಮ್ಮ ಮೇಲೂ ದಾಳಿ ನಡೆಯುವ ಸಾಧ್ಯತೆ ಇದೆ ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜೂನ್ 24: ಜಾರಿ ನಿರ್ದೇಶನಾಲಯ ದಾಳಿಗಳ ಸ್ವರೂಪ ಮತ್ತು ಅವುಗಳ ರಾಜಕೀಯ ಉದ್ದೇಶಗಳ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳಾದ ಐಟಿ, ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಕಳೆದ 12 ವರ್ಷಗಳಲ್ಲಿ ದೇಶಾದ್ಯಂತ ಸಾವಿರಾರು ಇಡಿ ದಾಳಿಗಳು ನಡೆದಿವೆ. ಆದರೆ, ಈ ದಾಳಿಗಳಲ್ಲಿ ಅಪರಾಧ ಸಾಬೀತಾದ ಪ್ರಕರಣಗಳ ಪ್ರಮಾಣ ಶೇಕಡಾ 2 ಕ್ಕಿಂತಲೂ ಕಡಿಮೆ, ಅಂದರೆ ಶೇಕಡಾ 1.5 ಕ್ಕಿಂತಲೂ ಕಡಿಮೆ ಇದೆ. ಈ ಅಂಕಿಅಂಶಗಳು ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಯಾವಾಗ ಬೇಕೋ ಆವಾಗ ಛೂ ಬಿಡ್ತಾರೆ ಎಂದು ಕೇಂದ್ರ ಸಂಸ್ಥೆಗಳ ಕಾರ್ಯವೈಖರಿಯನ್ನು ಖಂಡಿಸಿದ ಖರ್ಗೆ, ತಮ್ಮ ಮೇಲೂ ಇಡಿ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇವತ್ತಲ್ಲ ನಾಳೆ ಅದು ಆಗಬಹುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿಕರ ಮನೆ ಮೇಲೆ ಇಡಿ ದಾಳಿಯಾದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us