ಕೇವಲ ಹಿರಿಯ ಶಾಸಕರನ್ನು ಮಾತ್ರ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಲಾಗಿದೆ: ಸತೀಶ್ ಜಾರಕಿಹೊಳಿ

ಬುಧವಾರ ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಗೃಹ ಸಚಿವ ಜಿ ಪರಮೇಶ್ವರ್ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅಂತಿಮಗೊಳಿಸುವಾಗ ತಮ್ಮನ್ನೂ ಆಯ್ಕೆ ಪ್ರಕ್ರಿಯೆಯ ಭಾಗ ಮಾಡಿಕೊಳ್ಳಬೇಕಿತ್ತು ಅಂತ ಅಸಮಾಧಾನ ಹೊರ ಹಾಕಿದ್ದರು.

ಕೇವಲ ಹಿರಿಯ ಶಾಸಕರನ್ನು ಮಾತ್ರ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಲಾಗಿದೆ: ಸತೀಶ್ ಜಾರಕಿಹೊಳಿ
|

Updated on: Nov 30, 2023 | 2:33 PM

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಅಂತಿಮಗೊಳಿಸುವಾಗ ಹಿರಿಯ ನಾಯಕ ಜಿ ಪರಮೇಶ್ವರ್ (G Parameshwar) ಅವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗ ಮಾಡದಿರುವುದು ತಪ್ಪು, ಯಾಕೆಂದರೆ ಅವರು 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಅವರು ನಿಗಮ ಮಂಡಳಿಗಳಿಗೆ (boards and corporations) ಕೇವಲ ಹಿರಿಯ ಶಾಸಕರನ್ನು ಮಾತ್ರ ಪರಿಗಣಿಸಲಾಗಿದೆ, ಹೊಸಬರಿಗೆ ಅವಕಾಶ ನೀಡಿಲ್ಲ, ಮೂರ್ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸೀನಿಯರ್ ಗಳ ಹೆಸರುಗಳನ್ನು ಪಟ್ಟಿಯಲ್ಲ್ಲಿ ಸೇರಿಸಲಾಗಿದೆ ಎಂದು ಸತೀಶ್ ಹೇಳಿದರು. ಬೆಳಗಾವಿ ಜಿಲ್ಲೆಯಲ್ಲೂ ಹಿರಿಯ ಶಾಸಕರಿದ್ದಾರೆ ಎಂದ ಅವರು 2-3 ಜನರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆಯೆಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us