ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ಆರಂಭಿಸುವುದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ: ಕುಮಾರಸ್ವಾಮಿ

Edited By: ವಿವೇಕ ಬಿರಾದಾರ

Updated on: Mar 02, 2025 | 10:54 AM

ಬಲ್ಡೋಟಾ ಕಾರ್ಖಾನೆ ಆರಂಭಕ್ಕೆ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಕೊಪ್ಪಳದ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ಆರಂಭಿಸುವುದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ. ಬಲ್ಡೋಟಾ ಕಾರ್ಖಾನೆ ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಕೊಪ್ಪಳ, ಮಾರ್ಚ್​ 02: ಬಲ್ಡೋಟಾ ಕಾರ್ಖಾನೆ ಆರಂಭಕ್ಕೆ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಕೊಪ್ಪಳದ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಒಂದು ದಿನ ಕೊಪ್ಪಳ ನಗರ ಬಂದ್​ಗೆ ಕರೆ ನೀಡಲಾಗಿತ್ತು. ರವಿವಾರ (ಮಾರ್ಚ್ 02) ಕೊಪ್ಪಳ ನಗರಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ, ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸದಂತೆ ಸ್ಥಳೀಯರು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, “ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ. ಬಲ್ಡೋಟಾ ಕಾರ್ಖಾನೆ ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಮುಂದೆ ಈ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್​ಡಿಕೆ ಹೇಳಿದರು.

“ನಾನು‌ ರಾಜ್ಯ ಸರ್ಕಾರಕ್ಕೆ ಜನರಿಗೆ ತೊಂದರೆಯಾಗುವ ಯೋಜನೆ‌ ಬೇಡ ಎಂದು ಹೇಳಿದ್ದೇನೆ. ಗವಿಮಠದ ಶ್ರೀಗಳ ನೇತೃತ್ವದಲ್ಲಿ ಪಕ್ಷಬೇಧ ಮರೆತು ಬಂದ್ ಮಾಡಿದ್ದಾರೆ. ಈ ವಿಷಯದಲ್ಲಿ ಜನರ ಜೊತೆ ಸರ್ಕಾರ ಕೂತು ಚರ್ಚೆ ಮಾಡಬೇಕು” ಎಂದು ಹೇಳಿದರು.

Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More