ಚಿಕ್ಕಮಗಳೂರಿನಲ್ಲಿ ‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌, ಶಾಲೆಗಳಿಗೆ ರಜೆ, ನಿಷೇಧಾಜ್ಞೆ

Edited By:

Updated on: Nov 25, 2026 | 7:53 AM

‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಹಾಸನದಿಂದ ಚಿಕ್ಕಮಗಳೂರಿಗೆ ಕಾಡಾನೆಗಳ ಸ್ಥಳಾಂತರಕ್ಕೆ ಆಕ್ಷೇಪ ವ್ಯಕ್ತವಾಗಿದೆ. ತತ್ಕೋಳ ಅರಣ್ಯದ ಮೂಲಕ ಕಾಡಾನೆಗಳ ಸಾಗಾಟದಿಂದ ಜನರಿಗೆ ಹಾನಿಯಾಗುವ ಆತಂಕದಲ್ಲಿ ಮೂಡಿಗೆರೆ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಚಿಕ್ಕಮಗಳೂರು, ನವೆಂಬರ್ 25: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ‘ಆಪರೇಷನ್ ಗಜ’ ಕಾರ್ಯಾಚರಣೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಮೂಡಿಗೆರೆ ಬಂದ್‌ಗೆ ಕರೆ ನೀಡಲಾಗಿದೆ. ಹಾಸನದಿಂದ ಚಿಕ್ಕಮಗಳೂರು ಜಿಲ್ಲೆಗೆ ಕಾಡಾನೆಗಳನ್ನು ಸ್ಥಳಾಂತರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ಭುಗಿಲೆದ್ದಿದೆ. ತತ್ಕೋಳ ಅರಣ್ಯದ ಮೂಲಕ ಕಾಡಾನೆಗಳ ಸ್ಥಳಾಂತರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇಂದು (ನವೆಂಬರ್ 25) ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮೂಡಿಗೆರೆ ಬಂದ್ ಇರಲಿದ್ದು, ಹಲವು ಖಾಸಗಿ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಆಟೋ, ಟ್ಯಾಕ್ಸಿ ಚಾಲಕರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ. ಸ್ವಯಂಪ್ರೇರಿತರಾಗಿ ಎಲ್ಲರೂ ಈ ಬಂದ್‌ಗೆ ಬೆಂಬಲ ನೀಡುತ್ತಿದ್ದಾರೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಪಕ್ಷಾತೀತವಾಗಿಯೂ ಈ ಬಂದ್‌ಗೆ ಬೆಂಬಲ ವ್ಯಕ್ತವಾಗಿದ್ದು, ಕಾಡಾನೆಗಳ ಸ್ಥಳಾಂತರದಿಂದ ಅವುಗಳು ಜನರ ಓಡಾಟದ ಪ್ರದೇಶಗಳಿಗೆ ಬಂದು ಹಾನಿಯಾಗುವ ಸಾಧ್ಯತೆಯ ಬಗ್ಗೆ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
Barun Das CEO, TV9 Network