AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಮುಕ್ತ: ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ

ಆಪರೇಷನ್ ಮುಕ್ತ: ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 10, 2026 | 2:17 PM

Share

ಬೆಂಗಳೂರಿನಲ್ಲಿ ಆಪರೇಷನ್ ಮುಕ್ತ ಕಾರ್ಯಾಚರಣೆ ನಡೆಸಿ, 105 ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ವೈಟ್‌ಫೀಲ್ಡ್ ವಿಭಾಗಗಳಲ್ಲಿ 58 ತಂಡಗಳು 58 ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದವು. ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ. ಪತ್ತೆಯಾದ ಎಲ್ಲಾ ಅಕ್ರಮ ವಲಸಿಗರ ಬಗ್ಗೆ ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಓ) ಗೆ ಮಾಹಿತಿ ನೀಡಲಾಗಿದೆ. ಪ್ರಸ್ತುತ, ಈ ವಲಸಿಗರನ್ನು ವಲಸಿಗರ ಕೇಂದ್ರಗಳಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ.

ಬೆಂಗಳೂರು, ಆಗಸ್ಟ್​​ 10: ಆಪರೇಷನ್ ಮುಕ್ತ ಕಾರ್ಯಾಚರಣೆ ಅಡಿಯಲ್ಲಿ 105 ಮಂದಿ ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಲಾಗಿದೆ ಎಂದು ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ಮೂರು ವಿಭಾಗದಲ್ಲಿ ಅಕ್ರಮ ವಲಸಿಗರ ಪರಿಶೀಲನೆ ನಡೆಸಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ 1909 ಜನರ ಪರಿಶೀಲನೆ ನಡೆಸಿ, 43 ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಪತ್ತೆ ಮಾಡಲಾಗಿದೆ. ಅದೇ ರೀತಿ, ವೈಟ್‌ಫೀಲ್ಡ್ ವಿಭಾಗದಲ್ಲಿ 1035 ಜನರ ಪರಿಶೀಲನೆ ನಡೆಸಿದಾಗ, 62 ಅಕ್ರಮ ಬಾಂಗ್ಲಾದೇಶ ವಲಸಿಗರು ಪತ್ತೆಯಾಗಿದ್ದಾರೆ. ಪತ್ತೆಯಾದ ಒಟ್ಟು 105 ಅಕ್ರಮ ವಲಸಿಗರ ಬಗ್ಗೆ ಎಫ್‌ಆರ್‌ಆರ್‌ಓ (ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ) ಗೆ ಮಾಹಿತಿ ನೀಡಲಾಗಿದ್ದು, ಅವರನ್ನು ವಲಸಿಗರ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us