ಆಪರೇಷನ್ ಸಿಂಧೂರ್: ಭಾರತೀಯ ಸೇನೆಯನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ

Updated on: May 07, 2025 | 12:56 PM

ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆಯನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ್ದಾರೆ. ಈ ವಿಚಾರವಾಗಿ ಮಾತನಾಡಲು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಗೆ ಬಂದ ಅವರು, ಹಣೆಗೆ ದೊಡ್ಡದಾದ ಸಿಂಧೂರ ಇಟ್ಟುಕೊಂಡಿದ್ದು ಗಮನ ಸೆಳೆಯಿತು. ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯ ವಿಡಿಯೋ ಇಲ್ಲಿದೆ.

ಬೆಂಗಳೂರು, ಮೇ 7: ಪಾಕಿಸ್ತಾನದ ಹಾಗೂ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ನಮ್ಮ ಯೋಧರು ಭಯೋತ್ಪಾದಕರ ನೆಲೆ‌ಗಳನ್ನು ನಾಶ ಮಾಡಿ ಪರಾಕ್ರಮ ಮೆರೆದಿದ್ದಾರೆ. ದೇಶದ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪತ್ರಿಕಾಗೋಷ್ಠಿಗೆ ಬರುವ ವೇಳೆ ಸಿದ್ದರಾಮಯ್ಯ ಹಣೆಗೆ ದೊಡ್ಡದಾಗಿ ಸಿಂಧೂರ ಇಟ್ಟುಕೊಂಡು ಬಂದಿದ್ದು ಗಮನ ಸೆಳೆಯಿತು. ಈ ಕುರಿತು ಕೇಳಲಾದ ಪ್ರಶ್ನೆಗೆ ಅವರು, ‘‘ದೇವಸ್ಥಾನಕ್ಕೆ ಹೋಗಿ ಬಂದಿದ್ದೆ’’ ಎಂದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More