AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ ದ್ರೌಪದಿ ಮುರ್ಮು

ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ ದ್ರೌಪದಿ ಮುರ್ಮು

ಸುಷ್ಮಾ ಚಕ್ರೆ
|

Updated on: Aug 14, 2026 | 9:41 PM

Share

"ಮೂರೂ ಸಶಸ್ತ್ರ ಪಡೆಗಳು, ಎಲ್ಲಾ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯ ಕರ್ತವ್ಯ ನಿಷ್ಠೆಯನ್ನು ನಾನು ಶ್ಲಾಘಿಸುತ್ತೇನೆ. ಜಾಗತಿಕ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿಸುತ್ತಿರುವ ಭಾರತೀಯರನ್ನು ಹಾಗೂ ವಿದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರನ್ನು ನಾನು ಅಭಿನಂದಿಸುತ್ತೇನೆ" ಎಂದು ಹೇಳಿದರು.

ನವದೆಹಲಿ, ಆಗಸ್ಟ್ 14: 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu), ಭಯೋತ್ಪಾದಕ ಜಾಲಗಳ ವಿರುದ್ಧ ದಾಳಿ ನಡೆಸುವ ಭಾರತೀಯ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ‘ಆಪರೇಷನ್ ಸಿಂಧೂರ್’ ಪ್ರದರ್ಶಿಸಿದೆ. ಈ ಕಾರ್ಯಾಚರಣೆ ಭಯೋತ್ಪಾದಕರಿಗೆ ಪ್ರಬಲ ಸಂದೇಶ ರವಾನಿಸಿದೆ ಎಂದು ಹೇಳಿದರು. ಸಿಂಧೂ ನದಿ ನೀರು ಒಪ್ಪಂದದ ಕುರಿತು ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನ ದೇಶದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸಿರುವುದು ರಾಷ್ಟ್ರೀಯ ಹಿತಾಸಕ್ತಿಯಲ್ಲಿ, ಅದರಲ್ಲೂ ವಿಶೇಷವಾಗಿ ರೈತರಿಗಾಗಿ ತೆಗೆದುಕೊಂಡ ನಿರ್ಣಾಯಕ ಹೆಜ್ಜೆಯಾಗಿದೆ ಎಂದರು.

“ಮೂರೂ ಸಶಸ್ತ್ರ ಪಡೆಗಳು, ಎಲ್ಲಾ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯ ಕರ್ತವ್ಯ ನಿಷ್ಠೆಯನ್ನು ನಾನು ಶ್ಲಾಘಿಸುತ್ತೇನೆ. ಜಾಗತಿಕ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿಸುತ್ತಿರುವ ಭಾರತೀಯರನ್ನು ಹಾಗೂ ವಿದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರನ್ನು ನಾನು ಅಭಿನಂದಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us