AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್: ಮಹಾಭಿಯೋಗಕ್ಕೆ 'ಇಂಡಿ'ಒಕ್ಕೂಟ ಸಿದ್ಧತೆ

ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್: ಮಹಾಭಿಯೋಗಕ್ಕೆ ‘ಇಂಡಿ’ಒಕ್ಕೂಟ ಸಿದ್ಧತೆ

ನಯನಾ ರಾಜೀವ್
|

Updated on:Oct 06, 2026 | 11:14 AM

Share

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿ' ಮೈತ್ರಿಕೂಟದ ಸಂಸದರು ಸಂಸತ್ ಭವನದಿಂದ ಚುನಾವಣಾ ಆಯೋಗದ ಕೇಂದ್ರ ಕಚೇರಿ 'ನಿರ್ವಚನ ಸದನ'ದವರೆಗೆ ಮಂಗಳವಾರ ಬೃಹತ್ ಪಾದಯಾತ್ರೆ ನಡೆಸಿದರು. ಆಯೋಗವು "ವಂಚನಾ ಆಯೋಗ"ವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ನಾಯಕರು, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಿಇಸಿ ವಿರುದ್ಧ ಮಹಾಭಿಯೋಗ ನಿರ್ಣಯ ತರಲು ನೀಲನಕ್ಷೆ ಸಿದ್ಧಪಡಿಸಿದ್ದಾರೆ.

ನವದೆಹಲಿ, ಅಕ್ಟೋಬರ್ 06:ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಇಂಡಿ’ ಮೈತ್ರಿಕೂಟದ ಸಂಸದರು ಸಂಸತ್ ಭವನದಿಂದ ಚುನಾವಣಾ ಆಯೋಗದ ಕೇಂದ್ರ ಕಚೇರಿ ‘ನಿರ್ವಚನ ಸದನ’ದವರೆಗೆ ಮಂಗಳವಾರ ಬೃಹತ್ ಪಾದಯಾತ್ರೆ ನಡೆಸಿದರು. ಆಯೋಗವು “ವಂಚನಾ ಆಯೋಗ”ವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ನಾಯಕರು, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಿಇಸಿ ವಿರುದ್ಧ ಮಹಾಭಿಯೋಗ ನಿರ್ಣಯ ತರಲು ನೀಲನಕ್ಷೆ ಸಿದ್ಧಪಡಿಸಿದ್ದಾರೆ.

ಆದರೆ, ಈ ಮೆರವಣಿಗೆಯಿಂದ ಪ್ರಮುಖ ಮಿತ್ರಪಕ್ಷಗಳಾದ ಡಿಎಂಕೆ ಮತ್ತು ಎಎಪಿ ದೂರ ಉಳಿದಿರುವುದು ಗಮನ ಸೆಳೆಯಿತು. ಅಕ್ಟೋಬರ್ 10-20: ಬ್ಲಾಕ್ ಮಟ್ಟದಲ್ಲಿ ಬೈಕ್-ಸೈಕಲ್ ರ್ಯಾಲಿ ಹಾಗೂ ಪ್ರತಿಕೃತಿ ದಹನ. ಅಕ್ಟೋಬರ್ 25-ನವೆಂಬರ್ 25: ದೇಶಾದ್ಯಂತ ಬೂತ್ ಮಟ್ಟದಲ್ಲಿ “ವೋಟ್ ಬಚಾವೋ” ಚೌಪಾಲ್ ಸಭೆಗಳು.

ನವೆಂಬರ್ 1 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಜನಾಕ್ರೋಶ ಸಮಾವೇಶ. ನವೆಂಬರ್ 25-26: ‘ಚಲೋ ದೆಹಲಿ’ ಮೂಲಕ ಸಂವಿಧಾನ ದಿನದಂದು ರಾಜಧಾನಿ ಮುತ್ತಿಗೆ ನಡೆಯಲಿದೆ. ಚುನಾವಣಾ ಆಯೋಗದ ನಿರ್ಧಾರಗಳ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಮುಂದುವರೆಸಿದ್ದು, ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆವರೆಗೂ ಈ ಹೋರಾಟ ತೀವ್ರಗೊಳಿಸಲು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ನಿರ್ಧರಿಸಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 06, 2026 11:13 AM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More