ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ಸಂಸತ್ ಭವನದ ಬಳಿ ವಿಪಕ್ಷಗಳ ಪ್ರತಿಭಟನೆ

Updated on: Aug 12, 2026 | 1:14 PM

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಆರೋಪ ಖಂಡಿಸಿ ವಿಪಕ್ಷ ಸಂಸದರು ಸಂಸತ್ ಭವನದ ಬಳಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಸದಸ್ಯರು ಭಾಗವಹಿಸಿದ್ದರು. ಅಣುಕು ಹುಂಡಿಗೆ ಹಣ ಹಾಕುವ ಮೂಲಕ ಸಂಸದರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು, ಆಡಳಿತ ಪಕ್ಷದ ವಿರುದ್ಧ ಘೋಷಣೆ ಕೂಗಿದ್ದಾರೆ.

ನವದೆಹಲಿ, ಆಗಸ್ಟ್​​ 12: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನ ಆರೋಪದ ವಿಚಾರವಾಗಿ ವಿರೋಧ ಪಕ್ಷಗಳ ಸಂಸದರು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ವಿಪಕ್ಷ ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ಸಂದರ್ಭದಲ್ಲಿ, ಸಂಸದರು ಅಣುಕು ಹುಂಡಿಯನ್ನು ಬಳಸಿ ಅದಕ್ಕೆ ಹಣವನ್ನು ಹಾಕುವ ಮೂಲಕ ಸಾಂಕೇತಿಕವಾಗಿ ತಮ್ಮ ವಿರೋಧ ಪ್ರದರ್ಶಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us