AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ, ಸಂಸತ್ ಹೊರಗೆ ಪ್ರತಿಭಟನೆ

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ, ಸಂಸತ್ ಹೊರಗೆ ಪ್ರತಿಭಟನೆ

ಸುಷ್ಮಾ ಚಕ್ರೆ
|

Updated on: Feb 05, 2026 | 5:54 PM

Share

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುತ್ತಿರುವಾಗ ರಾಜ್ಯಸಭೆ ಅಧಿವೇಶನದಿಂದ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದ್ದಾರೆ. ಇದು ಮೇಲ್ಮನೆಯಲ್ಲಿ ಕೋಲಾಹಲದ ವಾತಾವರಣಕ್ಕೆ ಕಾರಣವಾಯಿತು. ಲೋಕಸಭಾ ವಿಪಕ್ಷ ನಾಯಕನಿಗೆ ಮಾತನಾಡಲು ಅವಕಾಶ ನೀಡಿ ಎಂದು ಘೋಷಣೆಗಳನ್ನು ಕೂಗುತ್ತಾ ಪ್ರತಿಪಕ್ಷಗಳು ಸದನದಿಂದ ಮಾಡಿ ಹೊರನಡೆದವು.

ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಉತ್ತರಿಸುವಾಗ ಸದನವನ್ನು ಉದ್ದೇಶಿಸಿ ಮಾತನಾಡುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು “ಲೋಕಸಭಾ ವಿಪಕ್ಷ ನಾಯಕ ಮಾತನಾಡಲಿ” ಎಂಬ ಘೋಷಣೆಗಳನ್ನು ಕೂಗುತ್ತಾ ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿವೆ. ಇದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆದರೂ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಮುಂದುವರೆಸಿದರು. ಇದರಿಂದ ಕೋಪಗೊಂಡ ಕಾಂಗ್ರೆಸ್ ಸಂಸದರು ಸಂಸತ್ ಹೊರಗೆ ಮೆಟ್ಟಿಲ ಮೇಲೆ ಪ್ರತಿಭಟನೆ ನಡೆಸಿದರು.

ಪ್ರಧಾನಿ ತಮ್ಮ ಭಾಷಣವನ್ನು ಮುಂದುವರಿಸುತ್ತಿದ್ದಂತೆ, ಮೇಲ್ಮನೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ವಿರೋಧ ಪಕ್ಷದ ಸದಸ್ಯರು ನಿರಂತರ ಗದ್ದಲವನ್ನು ಸೃಷ್ಟಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಪುಸ್ತಕವನ್ನು ರಾಹುಲ್ ಗಾಂಧಿ ಉಲ್ಲೇಖಿಸಲು ಅವಕಾಶ ನೀಡಲು ಲೋಕಸಭೆ ಸ್ಪೀಕರ್ ನಿರಾಕರಿಸಿದ್ದಕ್ಕೆ ಪ್ರತಿಭಟನೆ ನಡೆಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ