Grand Alliance: ಬಿಜೆಪಿ ನೇತೃತ್ವದ ಎನ್ ಡಿಎ ವಿರುದ್ಧ ಹೋರಾಡಲು ವಿರೋಧ ಪಕ್ಷಗಳ ಸಭೆ, ಹಲವಾರು ನಾಯಕರು ಭಾಗಿ
ಬಿಜೆಪಿ ನೇತೃತ್ವದ ಎನ್ ಡಿ ಎ ವಿರುದ್ಧ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಸಾಮೂಹಿಕ ಹೋರಾಟ ನಡೆಸಲು ಒಗ್ಗೂಡುವುದು ಸಭೆಯ ಆಶಯವಾಗಿದೆ.
ಬೆಂಗಳೂರು: ಸಮಾನಮಸ್ಕ ವಿರೋಧ ಪಕ್ಷಗಳ ನಾಯಕರು ಮತ್ತೊಮ್ಮೆ ಮೈತ್ರಿ ಕೂಟ (ಮಹಾ ಘಟಬಂಧನ್) (Grand Alliance) ರಚಿಸಲು ನಗರದ ಖಾಸಗಿ ಹೋಟೆಲೊಂದರಲ್ಲಿ ಸಭೆ ಸೇರಿದ್ದಾರೆ. 24 ಪಕ್ಷಗಳ 50 ಕ್ಕೂ ಹೆಚ್ಚು ನಾಯಕರು ಸಬೆಯಲ್ಲಿ ಪಾಲ್ಗೊಂಡಿದ್ದು ಬಿಜೆಪಿ ನೇತೃತ್ವದ ಎನ್ ಡಿ ಎ (NDA) ವಿರುದ್ಧ 2024ರ ಸಾರ್ವತ್ರಿಕ ಚುನಾವಣೆಯಲ್ಲಿ (Lok Sabha Polls) ಸಾಮೂಹಿಕ ಹೋರಾಟ ನಡೆಸಲು ಒಗ್ಗೂಡುವುದು ಸಭೆಯ ಆಶಯವಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ, ದೆಹಲಿಯ ಅರವಿಂದ ಕೇಜ್ರಿವಾಲ್, ತಮಿಳುನಾಡಿನ ಎಂಕೆ ಸ್ಟಾಲಿನ್, ಬಿಹಾರದ ನಿತೀಶ್ ಕುಮಾರ್, ಎನ್ ಸಿಪಿ ಚೀಫ್ ಶರದ್ ಪವಾರ್, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಫರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲ್ಲಾ, ಲಾಲೂ ಪ್ರಸಾದ್ ಯಾದವ್, ಮಹಾರಾಷ್ಟ್ರ ಮಾಜಿ ಸಿಎಂ ಮತ್ತು ಶಿವಸೇನೆ (ಉದ್ಧವ್ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ, ಕಾಂಗ್ರೆಸ್ ಪಕ್ಷದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ