Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಬೊಕ್ಕಸದಿಂದ ಸಂಬಳ ನೀಡುತ್ತಿರುವುದನ್ನು ವಿರೋಧಿಸಿ ವಿಷಕ್ಷಗಳ ರ‍್ಯಾಲಿ

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಬೊಕ್ಕಸದಿಂದ ಸಂಬಳ ನೀಡುತ್ತಿರುವುದನ್ನು ವಿರೋಧಿಸಿ ವಿಷಕ್ಷಗಳ ರ‍್ಯಾಲಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 12, 2025 | 1:31 PM

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರವು ಹೆಚ್ ಎಂ ರೇವಣ್ಣ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಪದಾಧಿಕಾರಿಗಳಿಗೆ ಬೊಕ್ಕಸದಿಂದ ಸಂಬಳ ನೀಡುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಅರೋಪಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಗೆ ಅನುದಾನ ನೀಡದ ಸರ್ಕಾರ ತೆರಿಗೆ ಹಣವನ್ನು ಹೀಗೆ ಪೋಲು ಮಾಡುತ್ತಿದೆ, ಬೇಕಿದ್ದರೆ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಸಂಬಳ ನೀಡಲಿ ಎಂದು ನಾಯಕರು ಹೇಳಿದರು.

ಬೆಂಗಳೂರು, ಮಾರ್ಚ್ 12: ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ (guarantee scheme implementation) ರಚಿಸಿರುವ ಸಮಿತಿಯ ಔಚಿತ್ಯವನ್ನು ಪ್ರಶ್ನಿಸಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಇಂದು ವಿಧಾನ ಸೌಧದ ಅವರಣದಲ್ಲಿ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಲ್ಲದೆ ರಾಜಭವನವದವರೆಗೆ ಕಾಲ್ನಡಿಗೆ ಮೂಲಕ ರ‍್ಯಾಲಿಯಲ್ಲಿ ತೆರಳಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದರು. ರ‍್ಯಾಲಿಯ ನೇತೃತ್ವವನ್ನು ವಿರೋಧ ಪಕ್ಷದ ನಾಯಕ ಅರ್ ಅಶೋಕ ಮತ್ತು ಬಿಕೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಹಿಸಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗ್ತಿಲ್ಲ: ಹೈಕಮಾಂಡ್ ಮುಂದೆ ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಸಚಿವರ ಡಿಮ್ಯಾಂಡ್