ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

Ganapathi Sharma
|

Updated on: Nov 21, 2024 | 2:54 PM

ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಸು ಕಾಲೋನಿಗೆ ಭೇಟಿ ನೀಡಿದ ಅಶೋಕ್, ಇದು ಮನೆಹಾಳು ಸರ್ಕಾರ. ಬಡವರ ಅನ್ನ ಕಸಿದ ಇವರಿಗೆ ನರಕಕ್ಕೆ ಹೋದರೂ ಜಾಗ ಸಿಗದು ಎಂದು ಅವರು ಕಿಡಿ ಕಾರಿದರು.

ಬೆಂಗಳೂರು, ನವೆಂಬರ್ 21: ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನ್ನಭಾಗ್ಯ ಅನ್ನಭಾಗ್ಯ ಎಂದುಕೊಂಡು ಬಡವರಿಗೆ ಕನ್ನಭಾಗ್ಯ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ಕೊಳೆಗೇರಿ ಪ್ರದೇಶ ಅರಸು ಕಾಲೋನಿಗೆ ಭೇಟಿ ನೀಡಿದ ಸಮದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಡವರಿಗೆ ಉಣ್ಣಲು ಅನ್ನ ಕೊಡಬೇಕಾದ ಸರ್ಕಾರ ಅನ್ನವನ್ನು ಕದಿಯುವ ಕೆಲಸ ಮಾಡಿದೆ ಎಂದು ಟೀಕಿಸಿದರು.

ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದುಮಾಡಲಾಗಿದೆ ಎಂದು ಸಿಎಂ ಹೇಳುತ್ತಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 250 ಸರ್ಕಾರಿ ನೌಕರರ ಬಳಿ ಕಾರ್ಡ್ ಇತ್ತು ಎಂದರೂ ಅದ್ಹೇಗೆ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಎಂದು ಅಶೋಕ್ ಪ್ರಶ್ನಿಸಿದರು.

ಇದನ್ನೂ ಓದಿ: ಬಡವರ ಅನ್ನ ಕಸಿಯುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಶಾಪ ತಟ್ಟದಿರದು: ಬಸವರಾಜ ಬೊಮ್ಮಾಯಿ

ಹೊಸದಾಗಿ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಸಚಿವರು ಹೇಳುತ್ತಾರೆ. ಬಿಪಿಎಲ್ ಕಾರ್ಡ್ ರದ್ದು ಮಾಡುವಾಗ ಅರ್ಜಿ ಕೊಟ್ಟಿದ್ದೀರಾ? ನೋಟಿಸ್ ಕೊಟ್ಟಿದ್ದೀರಾ? ನೀವು ಮಾಡಿರುವ ತಪ್ಪಿಗೆ ಬಡವರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಅಶೋಕ್ ಕಿಡಿಕಾರಿದರು. ಅಲ್ಲದೆ, ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಿದವರಿಂದ ಲಂಚ ಪಡೆಯಲು ಇದು ಪಿತೂರಿ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ