ರೈಲಿನ ರೀತಿ ಇನ್ಮುಂದೆ ಕೆಎಸ್ಆರ್ಟಿಸಿ ಬಸ್ ಕೂಡ ಟ್ರ್ಯಾಕ್ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಕೆಎಸ್ಆರ್ ಟಿಸಿಯ 8300 ಬಸ್‌ಗಳಲ್ಲಿ ವಾಹನ ಟ್ರ್ಯಾಕಿಂಗ್ ಮತ್ತು ಮಾನಿಟರಿಂಗ್ ಸಿಸ್ಟಮ್ (VTMS) ಅಳವಡಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಇದರಿಂದಾಗಿ ಪ್ರಯಾಣಿಕರು ತಮ್ಮ ಬಸ್‌ಗಳನ್ನು ನೈಜ ಸಮಯದಲ್ಲಿ ಟ್ರ್ಯಾಕ್ ಮಾಡಬಹುದಾಗಿದೆ. ಸಾರಿಗೆ ಇಲಾಖೆ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಪರಿಚಯಿಸುತ್ತಿದ್ದು, ಈ ವ್ಯವಸ್ಥೆ ಜೂನ್ 2025 ರಲ್ಲಿ ಜಾರಿಗೆ ಬರುವ ನಿರೀಕ್ಷೆಯಿದೆ. VTMS ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.
ರೈಲಿನ ರೀತಿ ಇನ್ಮುಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ಗಳನ್ನೂ ಸಹಿತ ಟ್ರ್ಯಾಕ್ ಮಾಡಬಹುದಾಗಿದೆ. ಹೌದು, ರಾಜ್ಯ ಸಾರಿಗೆ ಇಲಾಖೆ 8,300 ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ವಾಹನ ಟ್ರ್ಯಾಕಿಂಗ್ ಮತ್ತು ಮಾನಿಟರಿಂಗ್ ಸಿಸ್ಟಮ್ (VTMS) ಅಳವಡಿಸಲು ನಿರ್ಧರಿಸಿದೆ. ಈ ಸಂಬಂಧ ಸಾರಿಗೆ ಇಲಾಖೆ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಪರಿಚಯಿಸುತ್ತಿದೆ. ಈ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ಕೆಎಸ್ಆರ್ಟಿಸಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಈ ಹೊಸ ವ್ಯವಸ್ಥೆ ಇದೇ ವರ್ಷ ಜೂನ್ನಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ಹಾಕಿದ್ದರೆ ಏನಿದು ವಿಟಿಎಮ್ಎಸ್? ಹೇಗೆ ಕಾರ್ಯ ನಿರ್ವಹಿಸುತ್ತದೆ? ಎಂಬ ಎಲ್ಲ ಮಾಹಿತಿಯನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ.
Published on: Apr 09, 2025 05:39 PM