‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಿಂದ ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

Updated on: Apr 03, 2026 | 9:36 PM

ನಟ ಒರಟ ಪ್ರಶಾಂತ್ ಅವರ ವೃತ್ತಿಜೀವನದಲ್ಲಿ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರ ಭಿನ್ನವಾಗಿದೆ ಎಂಬುದು ಟ್ರೇಲರ್ ನೋಡಿದರೆ ತಿಳಿಯುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ರವಿ ಶ್ರೀವತ್ಸ ಅವರು ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ ನೋಡಿ..

ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್ ಆಫ್ ಯುಕೆ’ (Gangs of UK) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಒರಟ ಪ್ರಶಾಂತ್‍, ಪದ್ಮಾ ವಾಸಂತಿ, ಪ್ರವೀಣ್, ಮುನಿ, ಸೋನು ಉಪಾಧ್ಯ, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ಪ್ರಜ್ವಲ್ ಮಸ್ಕಿ, ನವೀನ್, ವಿಕಾಸ್, ಉಮೇಶ್, ಅಮೋಘ್‍ ಮುಂತಾದ ಕಲಾವಿದರು ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರದ ಟ್ರೇಲರ್ ಸಖತ್ ಮಾಸ್ ಆಗಿದೆ. ಏಪ್ರಿಲ್ 10ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು. ನಟ ಒರಟ ಪ್ರಶಾಂತ್ (Orata Prashanth) ಅವರ ವೃತ್ತಿಜೀವನದಲ್ಲಿ ಈ ಚಿತ್ರ ಭಿನ್ನವಾಗಿದೆ ಎಂಬುದು ಟ್ರೇಲರ್ ನೋಡಿದರೆ ತಿಳಿಯುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಈ ಸಿನಿಮಾದಿಂದ ಬೇರೊಂದು ಅಧ್ಯಾಯ ಆರಂಭ ಆಗಲಿದೆ ಎಂದು ಪ್ರಶಾಂತ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More