ಮುಖ್ಯಮಂತ್ರಿಯಾಗುವ ಕ್ಷಮತೆಯ ಹಲವಾರು ನಾಯಕರು ಕಾಂಗ್ರೆಸ್ನಲ್ಲಿದ್ದಾರೆ: ಕೆ ಎನ್ ರಾಜಣ್ಣ
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಹೊರತುಪಡಿಸಿ ಮುಖ್ಯಮಂತ್ರಿಯಾಗಲು ಯೋಗ್ಯ ಹಲವಾರು ನಾಯಕರಿದ್ದಾರೆ ಎಂದು ಹೇಳಿ, ಹೆಚ್ ಕೆ ಪಾಟೀಲ, ಮಲ್ಲಿಕಾರ್ಜುನ ಖರ್ಗೆ ಹೆಸರುಗಳನ್ನು ಉಲ್ಲೇಖಿಸಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ ಎನ್ ರಾಜಣ್ಣ (KN Rajanna) ಸೋಮವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡುವಾಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿವಾದಿತ ವಿಷಯದ ಮೇಲೆ ಜಮೀರ್ ಅಹ್ಮದ್ (Zameer Ahmed) ಹೇಳಿದ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡಬೇಕಾದ ಅವಶ್ಯಕತೆ ಇಲ್ಲವೆಂದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಹೊರತುಪಡಿಸಿ ಮುಖ್ಯಮಂತ್ರಿಯಾಗಲು ಯೋಗ್ಯ ಹಲವಾರು ನಾಯಕರಿದ್ದಾರೆ ಎಂದು ಹೇಳಿ, ಹೆಚ್ ಕೆ ಪಾಟೀಲ (HK Patil), ಮಲ್ಲಿಕಾರ್ಜುನ ಖರ್ಗೆ ಹೆಸರುಗಳನ್ನು ಉಲ್ಲೇಖಿಸಿದರು.
Latest Videos