ಕೇವಲ ವಕ್ಫ್ ಭೂಕಬಳಿಕೆ ವಿರುದ್ಧ ನಮ್ಮ ಹೋರಾಟ ಬೇರೆ ಯಾರ ವಿರುದ್ಧವೂ ಅಲ್ಲ: ಬಸನಗೌಡ ಯತ್ನಾಳ್

ಕೇವಲ ವಕ್ಫ್ ಭೂಕಬಳಿಕೆ ವಿರುದ್ಧ ನಮ್ಮ ಹೋರಾಟ ಬೇರೆ ಯಾರ ವಿರುದ್ಧವೂ ಅಲ್ಲ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 30, 2024 | 5:39 PM

ಬಸನಗೌಡ ಪಾಟೀಲ್ ಯತ್ನಾಳ್ ಬ್ಯಾಕ್​​ಪುಟ್​ನಲ್ಲಿರೋದು ಅವರ ಮಾತುಗಳಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಅವರ ವಿರುದ್ಧ ಎಂಪಿ ರೇಣುಕಾಚಾರ್ಯ, ಬಿಸಿ ಪಾಟೀಲ್, ಹರತಾಳು ಹಾಲಪ್ಪ ಮತ್ತು ಅನೇಕ ಕಾರ್ಯಕರ್ತರು ನೀಡಿದ ಉಗ್ರ ಹೇಳಿಕೆಗಳನ್ನು ವರದಿ ಮಾಡಿದ್ದೇವೆ, ಯತ್ನಾಳ್​ರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂಬ ಒತ್ತಾಯ ಹೆಚ್ಚುತ್ತಿದೆ, ಇದೇ ಕಾರಣಕ್ಕೆ ಯತ್ನಾಳ್ ಮೆತ್ತಾಗಾಗಿರುವ ಸಾಧ್ಯತೆ ಇದೆ.

ಬಾಗಲಕೋಟೆ: ಬಿಜೆಪಿಯಲ್ಲಿ ಎರಡು ಬಣಗಳ ಹೋರಾಟ ನಡೆಯುತ್ತಿದೆ ಎಂಬ ಅಂಶವನ್ನು ಶಾಸಕ ಬಸನಗೌಡ ಪಾಟೀಲ್ ಅಲ್ಲಗಳೆದರು. ಜಿಲ್ಲೆಯ ಬನಹಟ್ಟಿಯಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು ತಮ್ಮ ತಂಡ ಯಾರ ವಿರುದ್ಧವೂ ಹೋರಾಟ ಮಾಡುತ್ತಿಲ್ಲ, ಕೇವಲ ವಕ್ಫ್ ವಿರುದ್ಧ ಮಾತ್ರ ಹೋರಾಟ ಮಾಡುತ್ತಿದೆ, ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ ಮಾಡುತ್ತಿದ್ದೇವೆ, ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ತಂದು ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತಮ್ಮ ಸಮಿತಿ ಕೆಲ ಸಲಹೆಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಲಿದೆ, ಪ್ರತಾಪಸಿಂಹ, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಜಿ ಎಮ್ ಸಿದ್ದೇಶ್ವರ ಮತ್ತು ತನ್ನನ್ನು ಒಳಗೊಂಡ ನಿಯೋಗವೊಂದು 2ನೇ ತಾರೀಖು ದೆಹಲಿಗೆ ಹೋಗಿ ತಾವು ನಡೆಸಿದ ಹೋರಾಟದ ಬಗ್ಗೆ ಒಂದು ಮಧ್ಯಂತರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಿದ್ದೇವೆ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಸವಣ್ಣನ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆಂಬ ಯತ್ನಾಳ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ