Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಆಚರಣೆಗೆ ಅಡ್ಡಿಯುಂಟು ಮಾಡುವುದನ್ನು ನಮ್ಮ ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಧಾರ್ಮಿಕ ಆಚರಣೆಗೆ ಅಡ್ಡಿಯುಂಟು ಮಾಡುವುದನ್ನು ನಮ್ಮ ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 02, 2023 | 12:35 PM

ಯಾವುದೇ ಸಮುದಾಯ ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದ್ದರೆ ಅದಕ್ಕೆ ಅಡ್ಡಿಯನ್ನುಂಟು ಮಾಡೋದು ಕಾನೂನುಬಾಹಿರ ಮತ್ತು ದುಷ್ಕೃತ್ಯ ಅನಿಸಿಕೊಳ್ಳುತ್ತದೆ, ಧಾರ್ಮಿಕ ಅಸಹಿಷ್ಣುತೆಯೆಡೆ ತಮ್ಮ ಸರ್ಕಾರ ಕಠಿಣ ನಿಲುವು ಹೊಂದಿದೆ ಎಂದು ಹೇಳಿದ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಪೊಲೀಸರು ಸಫಲರಾಗಿದ್ದಾರೆ ಮತ್ತು ನಗರದಲ್ಲಿ ಈಗ ಶಾಂತಿ ನೆಲೆಸಿದೆ ಎಂದರು.

ಬೆಂಗಳೂರು: ಶಿವಮೊಗ್ಗದಲ್ಲಿ ನಿನ್ನೆ ಧಾರ್ಮಿಕ ಮೆರವಣಿಗೆಯೊಂದರ (religious procession) ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಹಾಗೂ ಪೊಲೀಸ್ ಲಾಠಿ ಚಾರ್ಜ್ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ ಧಾರ್ಮಿಕ ಆಚರಣೆಗಳು ನಡೆಯುವ ಸಂದರ್ಭದಲ್ಲಿ ಯಾರೇ ಅಡಚಣೆ ಉಂಟು ಮಾಡಲು ಪ್ರಯತ್ನಿಸಿದರೂ ತಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು. ದುಷ್ಕರ್ಮಿಗಳು ಕಲ್ಲು ತೂರಾಟ (stone pelting) ನಡೆಸಿದಾಗ ಉದ್ವಿಗ್ನ ಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಅವರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ ಮತ್ತು 40 ಕ್ಕೂ ಹೆಚ್ಚು ದುಷ್ಕರ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಯಾವುದೇ ಸಮುದಾಯ ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದ್ದರೆ ಅದಕ್ಕೆ ಅಡ್ಡಿಯನ್ನುಂಟು ಮಾಡೋದು ಕಾನೂನುಬಾಹಿರ ಮತ್ತು ದುಷ್ಕೃತ್ಯ ಅನಿಸಿಕೊಳ್ಳುತ್ತದೆ, ಧಾರ್ಮಿಕ ಅಸಹಿಷ್ಣುತೆಯೆಡೆ ತಮ್ಮ ಸರ್ಕಾರ ಕಠಿಣ ನಿಲುವು ಹೊಂದಿದೆ ಎಂದು ಹೇಳಿದ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಪೊಲೀಸರು ಸಫಲರಾಗಿದ್ದಾರೆ ಮತ್ತು ನಗರದಲ್ಲಿ ಈಗ ಶಾಂತಿ ನೆಲೆಸಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ