ನಮ್ಮ ಸರ್ಕಾರ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುತ್ತಿದೆ: ಸಿದ್ದರಾಮಯ್ಯ
ಶಾಲೆಗಳಲ್ಲಿ ಓದುವ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಿದ್ದರೆ ಅವರಿಗೆ ಪರೀಕ್ಷೆಗಳಲ್ಲಿ ಕೃಪಾಂಕಗಳನ್ನು ನೀಡುವ ಬಗ್ಗೆಯೂ ಸಿಎಂ ಮಾತಾಡಿದರು. ಪ್ರಸ್ತುತ ಕೃಪಾಂಕ ನೀಡುತ್ತಿಲ್ಲವೆನ್ನುವುದನ್ನು ಖಚಿತಪಡಿಸಿಕೊಂಡ ಅವರು ವಿಷಯದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮಿನಿ ಒಲಂಪಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರ ಕ್ರೀಡಾಪಟುಗಳಿಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ಹೇಳಿದರು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುವ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯ ಉದ್ಯೋಗಗಳಲ್ಲಿ ಶೇಕಡ 3 ಮತ್ತು ಇತರ ಇಲಾಖೆಗಳಲ್ಲಿ ಶೇಕಡ 2ರಷ್ಟು ಮೀಸಲಾತಿಯನ್ನು ನೀಡುತ್ತಿದೆ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ ₹50 ಕೋಟಿ ಆಫರ್, ಸಿದ್ದರಾಮಯ್ಯ ಮಾಡಿದ ಆರೋಪ ನಿಜವೆಂದ ಶಿವಕುಮಾರ್