‘ನಮ್ಮ ಹೃದಯಗಳ ಮಧ್ಯೆ ಮದುವೆ ಆಗಿದೆ, ನಾವು ಖುಷಿಯಿಂದ ಇದ್ದೇವೆ’: ನರೇಶ್ ನೇರ ಮಾತು

Updated on: May 18, 2023 | 8:26 AM

‘ನೀವಿಬ್ಬರೂ ಗೆಳೆಯರೇ ಅಥವಾ ಅದಕ್ಕಿಂತಲೂ ಹೆಚ್ಚೇ’ ಎಂದು ಮಾಧ್ಯಮದವರು ಪ್ರಶ್ನೆ ಮಾಡಿದರು. ಇದಕ್ಕೆ ನರೇಶ್ ನೇರವಾಗಿ ಉತ್ತರಿಸಿದ್ದಾರೆ.

ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಮಧ್ಯೆ ಇರೋ ಸಂಬಂಧ ಎಂಥದ್ದು ಎಂಬ ಪ್ರಶ್ನೆ ಅನೇಕರಲ್ಲಿದೆ. ಇದಕ್ಕೆ ಅವರ ಕಡೆಯಿಂದಲೂ ಸ್ಪಷ್ಟನೆ ಇಲ್ಲ. ಇಬ್ಬರೂ ಮದುವೆ ಆಗುತ್ತಾರೆ ಎನ್ನಲಾಗಿತ್ತು. ಹಿಗಿರುವಾಗಲೇ ಇಬ್ಬರೂ ಒಟ್ಟಾಗಿ ‘ಮತ್ತೆ ಮದುವೆ’  (Matte Maduve Movie) ಸಿನಿಮಾದಲ್ಲಿ ನಟಿಸಿದ್ದಾರೆ. ಮೇ 26ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆದಿದೆ. ‘ನೀವಿಬ್ಬರೂ ಗೆಳೆಯರೇ ಅಥವಾ ಅದಕ್ಕಿಂತಲೂ ಹೆಚ್ಚೇ’ ಎಂದು ಮಾಧ್ಯಮದವರು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ನರೇಶ್, ‘ನಮ್ಮ ಹೃದಯಗಳ ಮಧ್ಯೆ ಮದುವೆ ಆಗಿದೆ, ನಾವು ಖುಷಿಯಿಂದ ಇದ್ದೇವೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More