Priyank Kharge; ಸರಳೀಕರಣ ಮತ್ತು ಸಬಲೀಕರಣ ಸೂತ್ರದೊಂದಿಗೆ ಕಾಂಗ್ರೆಸ್ ಸರ್ಕಾರ ಕೆಲಸ ಮಾಡಲಿದೆ: ಪ್ರಿಯಾಂಕ್ ಖರ್ಗೆ, ಸಚಿವ

Priyank Kharge; ಸರಳೀಕರಣ ಮತ್ತು ಸಬಲೀಕರಣ ಸೂತ್ರದೊಂದಿಗೆ ಕಾಂಗ್ರೆಸ್ ಸರ್ಕಾರ ಕೆಲಸ ಮಾಡಲಿದೆ: ಪ್ರಿಯಾಂಕ್ ಖರ್ಗೆ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 02, 2023 | 12:28 PM

ಬಿಜೆಪಿ ಸರ್ಕಾರ ಕನ್ನಡಿಗರನ್ನು ಸಾಲಗಾರರನ್ನಾಗಿ ಮಾಡಿದೆ, ಹಾಗಾಗಿ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಸರ್ಕಾರ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವ ಹೇಳಿದರು.

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಆರಂಭಿಸಿದ ಯೋಜನೆಗಳು ಜನರಿಗೆ ಪ್ರಯೋಜನಕಾರಿಯಾಗಿದ್ದರೆ ಅವುಗಳನ್ನು ಖಂಡಿತವಾಗಿಯೂ ಮುಂದುವರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಇಂದು ಬೆಂಗಳೂರಲ್ಲಿ ಹೇಳಿದರು. ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡಿದ ಸಚಿವ, ಸರಳೀಕರಣ ಮತ್ತು ಸಬಲೀಕರಣ ಘೋಷವಾಕ್ಯದೊಂದಿಗೆ ಕಾಂಗ್ರೆಸ್ ಸರ್ಕಾರ (Congress Government) ಕೆಲಸ ಮಾಡಲಿದೆ ಎಂದರು. ಬಿಜೆಪಿ ಸರ್ಕಾರ (BJP Government) ಕನ್ನಡಿಗರನ್ನು ಸಾಲಗಾರರನ್ನಾಗಿ ಮಾಡಿದೆ, ಹಾಗಾಗಿ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಸರ್ಕಾರ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ